ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2036ರ ಒಲಿಂಪಿಕ್ಸ್ ಆತಿಥ್ಯ: ಐಒಸಿ ಜತೆ ಮಾತುಕತೆ 

Published 4 ಫೆಬ್ರುವರಿ 2024, 16:19 IST
Last Updated 4 ಫೆಬ್ರುವರಿ 2024, 16:19 IST
ಅಕ್ಷರ ಗಾತ್ರ

ನವದೆಹಲಿ: ಭಾರತವು 2036ರ ಒಲಿಂಪಿಕ್ಸ್‌ ಕ್ರೀಡಾಕೂಟದ ಆತಿಥ್ಯಕ್ಕಾಗಿ ಬಿಡ್ ಪ್ರಕ್ರಿಯೆ ಬಗ್ಗೆ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ಮುಂಬರುವ ಒಲಿಂಪಿಕ್ ಕೂಟಗಳ ಆತಿಥ್ಯದ ವ್ಯವಹಾರಗಳ ಕಮಿಷನರ್‌ ಜತೆ  ಮಾತುಕತೆ ನಡೆಸುತ್ತಿದ್ದೇವೆ ಎಂದು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಭಾನುವಾರ ತಿಳಿಸಿದೆ.

ಕಳೆದ ವರ್ಷ ಅಕ್ಟೋಬರ್ 14ರಂದು ಮುಂಬೈನಲ್ಲಿ ನಡೆದ ಐಒಸಿ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವು 2036ರ ಕ್ರೀಡಾಕೂಟದ ಆತಿಥ್ಯ ವಹಿಸುವುದಾಗಿ ಘೋಷಿಸಿದರು. ಆದರೆ, ಐಒಸಿ ಜತೆ  ಔಪಚಾರಿಕ ಮಾತುಕತೆ ಪ್ರಾರಂಭಿಸಿದೆ ಎಂದು ಐಒಎ ಅಧಿಕೃತವಾಗಿ ಹೇಳಿರುವುದು ಇದೇ ಮೊದಲು.

‘2030ರ ಯೂತ್ ಒಲಿಂಪಿಕ್ಸ್ ಮತ್ತು 2036ರ ಒಲಿಂಪಿಕ್ಸ್‌ ಕ್ರೀಡಾಕೂಟವನ್ನು ಭಾರತದಲ್ಲಿ ಆಯೋಜಿಸುವ ಬಗ್ಗೆ ಐಒಸಿ ಜತೆ  ಮಾತುಕತೆ ನಡೆಸಲಾಗುತ್ತಿದೆ‘ ಎಂದು ಐಒಎ ಅಧ್ಯಕ್ಷೆ ಪಿ.ಟಿ. ಉಷಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT