ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.12ರಿಂದ ಈಶ ಗ್ರಾಮೋತ್ಸವ

Published 4 ಆಗಸ್ಟ್ 2023, 6:31 IST
Last Updated 4 ಆಗಸ್ಟ್ 2023, 6:31 IST
ಅಕ್ಷರ ಗಾತ್ರ

ಬೆಂಗಳೂರು: ಈಶ ಫೌಂಡೇಷನ್‌ನ ಸಾಮಾಜಿಕ ಅಭಿವೃದ್ಧಿ ಅಂಗವಾದ ಈಶ ಔಟ್‌ರೀಚ್‌ ವತಿಯಿಂದ ಕರ್ನಾಟಕದ 13 ಜಿಲ್ಲೆಗಳ 3200ಕ್ಕೂ ಹಳ್ಳಿಗಳಲ್ಲಿ ಈಶ ಗ್ರಾಮೋತ್ಸವಕ್ಕೆ ಸಿದ್ಧತೆ ನಡೆದಿದ್ದು, ಆ.12ರಂದು ಸ್ಪರ್ಧೆಗಳಿಗೆ ಚಾಲನೆ ದೊರೆಯಲಿದೆ.

ಮೊದಲ ಹಂತದ ಪಂದ್ಯಗಳು ಆ.12 ಮತ್ತು 13ರಂದು ಚಿಕ್ಕಬಳ್ಳಾಪುರ, ವಿಜಯಪುರ, ಕೋಲಾರ, ವಿಜಯನಗರ, ಶಿವಮೊಗ್ಗ, ಮೈಸೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆಯಲಿವೆ. ಆ.19 ಮತ್ತು 20ರಂದು ಬೆಂಗಳೂರು ಗ್ರಾಮಾಂತರ, ತುಮಕೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ, ಆ.26 ಮತ್ತು 27ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯಲಿವೆ.

ಎರಡನೇ ಹಂತದ ಪಂದ್ಯಗಳು ಸೆ. 3ರಂದು ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ. ಸೆ.23ರಂದು ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿ ಫೈನಲ್‌ ಹಂತದ ಪಂದ್ಯಗಳು ನಡೆಯಲಿವೆ.

ಗ್ರಾಮೋತ್ಸವದಲ್ಲಿ ಭಾಗವಹಿಸಲು ನೋಂದಣಿ ಉಚಿತವಾಗಿದೆ. ಪುರುಷರಿಗೆ ವಾಲಿಬಾಲ್‌ ಮತ್ತು ಮಹಿಳೆಯರಿಗೆ ಥ್ರೋಬಾಲ್‌ ಸ್ಪರ್ಧೆ ಆಯೋಜಿಸಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಕಬಡ್ಡಿ ಸ್ಪರ್ಧೆಯೂ ನಡೆಯಲಿದೆ. ವಾಲಿಬಾಲ್‌ ವಿಜೇತರಿಗೆ ₹ 5 ಲಕ್ಷ, ಕಬಡ್ಡಿ ಮತ್ತು ಥ್ರೋಬಾಲ್‌ ವಿಜೇತರಿಗೆ ತಲಾ ₹ 2 ಲಕ್ಷ ಬಹುಮಾನವಿದೆ. ವಿವಿಧ ಸ್ಪರ್ಧೆಗಳಿಗೆ ಒಟ್ಟು ₹56 ಲಕ್ಷ ಬಹುಮಾನವಿದೆ ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ ಮೊ: 83000 30999.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT