ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌: ಫೈನಲ್‌ಗೆ ಮೊಮೊಟಾ

Last Updated 15 ಸೆಪ್ಟೆಂಬರ್ 2018, 18:11 IST
ಅಕ್ಷರ ಗಾತ್ರ

ಟೋಕಿಯೊ: ವಿಶ್ವ ಚಾಂಪಿಯನ್‌ ಕೆಂಟೊ ಮೊಮೊಟಾ ಅವರು ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿದ್ದಾರೆ.

ಶನಿವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ನಲ್ಲಿ ಮೊಮೊಟಾ 21–18, 21–11ರಲ್ಲಿ ಡೆನ್ಮಾರ್ಕ್‌ನ ವಿಕ್ಟರ್‌ ಆ್ಯಕ್ಸಲ್‌ಸನ್‌ ವಿರುದ್ಧ ಗೆದ್ದರು.

ಭಾನುವಾರ ನಡೆಯುವ ಫೈನಲ್‌ನಲ್ಲಿ ಕೆಂಟೊ, ಥಾಯ್ಲೆಂಡ್‌ನ ಕೊಶಿಟ್‌ ಫೆಟ್‌ಪ್ರಡಾಬ್‌ ವಿರುದ್ಧ ಆಡಲಿದ್ದಾರೆ.

ನಾಲ್ಕರ ಘಟ್ಟದ ಇನ್ನೊಂದು ಹೋರಾಟದಲ್ಲಿ ಕೊಶಿಟ್‌ 21–12, 21–16ರಲ್ಲಿ ದಕ್ಷಿಣ ಕೊರಿಯಾದ ಲೀ ಡೊಂಗ್‌ ಕೆವುನ್‌ ಅವರನ್ನು ಸೋಲಿಸಿದರು.

ಮಹಿಳೆಯರ ಸಿಂಗಲ್ಸ್‌ ವಿಭಾಗದ ಮೊದಲ ಸೆಮಿಫೈನಲ್‌ನಲ್ಲಿ ಜಪಾನ್‌ನ ನೊಜೊಮಿ ಒಕುಹರಾ 21–12, 21–12ರಲ್ಲಿ ಜಪಾನ್‌ನ ಅಯಾ ಒಹೊರಿ ಅವರನ್ನು ಮಣಿಸಿದರು.

ಇನ್ನೊಂದು ಪಂದ್ಯದಲ್ಲಿ ಸ್ಪೇನ್‌ನ ಕ್ಯಾರೋಲಿನ್‌ ಮರಿನ್‌ 21–12, 21–13ರಲ್ಲಿ ಚೀನಾದ ಚೆನ್‌ ಯೂಫಿ ವಿರುದ್ಧ ಗೆದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT