ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಮಾಸ್ಟರ್ಸ್‌ ಅಥ್ಲೆಟಿಕ್ಸ್‌: ಯೋಗೇಂದ್ರಗೆ ಡಬಲ್‌ ಚಿನ್ನ

Published 7 ಜನವರಿ 2024, 16:22 IST
Last Updated 7 ಜನವರಿ 2024, 16:22 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರಿನ ಎಂ.ಯೋಗೇಂದ್ರ ಅವರು ಹೊಸಕೋಟೆಯ ಬಿ. ಚನ್ನಭೈರಗೌಡ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯಗೊಂಡ ಕರ್ನಾಟಕ ರಾಜ್ಯ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ 60 ವರ್ಷ ಮೇಲಿನ ವಿಭಾಗದಲ್ಲಿ 5 ಸಾವಿರ ಮೀಟರ್ಸ್ ಮತ್ತು 10 ಸಾವಿರ ಮೀಟರ್ಸ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಫೆಬ್ರುವರಿ ತಿಂಗಳಲ್ಲಿ ಪುಣೆಯಲ್ಲಿ ನಡೆಯುವ ರಾಷ್ಟ್ರೀಯ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಅವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಯೋಗೇಂದ್ರ ಅವರು ಮೈಸೂರು ಅಥ್ಲೆಟಿಕ್ ಕ್ಲಬ್ ಕಾರ್ಯದರ್ಶಿಯೂ ಆಗಿದ್ದಾರೆ.

ಮಾದಪ್ಪ ಯೋಗೇಂದ್ರ
ಮಾದಪ್ಪ ಯೋಗೇಂದ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT