ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಫೂರ್ಣವಾಗಿ ಗುಣಮುಖನಾಗಿರುವೆ: ಕೆಂಟೊ ಮೊಮೊಟಾ

Last Updated 26 ಜೂನ್ 2020, 10:38 IST
ಅಕ್ಷರ ಗಾತ್ರ

ಟೋಕಿಯೊ: ‘ಗಾಯದಿಂದ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ಮುಂದಿನ ವರ್ಷ ನಡೆಯುವ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವುದು ಈಗ ನನ್ನ ಎದುರಿಗಿರುವ ಏಕೈಕ ಗುರಿ’ ಎಂದು ಜಪಾನ್‌ನ ಬ್ಯಾಡ್ಮಿಂಟನ್‌ ಆಟಗಾರ ಕೆಂಟೊ ಮೊಮೊಟಾ ಶುಕ್ರವಾರ ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ 25 ವರ್ಷ ವಯಸ್ಸಿನ ಮೊಮೊಟಾ ಅವರ ಕಣ್ಣಿಗೆ ಗಂಭೀರ ಗಾಯವಾಗಿತ್ತು. ಅವರ ಕಾರು ಚಾಲಕ ಮೃತಪಟ್ಟಿದ್ದರು. ಫೆಬ್ರುವರಿಯಲ್ಲಿ ಮೊಮೊಟಾ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

‘ಈಗ ಎಲ್ಲವನ್ನೂ ಸ್ಪಷ್ಟವಾಗಿ ನೋಡಬಲ್ಲೆ. ಹೀಗಾಗಿ ಅಭ್ಯಾಸದತ್ತ ಚಿತ್ತ ಹರಿಸಿದ್ದೇನೆ. ಕಠಿಣ ಪರಿಶ್ರಮದಿಂದ ತಾಲೀಮು ನಡೆಸಿ ಮುಂದಿನ ವರ್ಷ ನಡೆಯುವ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಲು ಪ್ರಯತ್ನಿಸುವೆ’ ಎಂದು ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮೊಮೊಟಾ ಹೇಳಿದ್ದಾರೆ.

ಕ್ಯಾಸಿನೊ ಒಂದಕ್ಕೆ ಭೇಟಿ ನೀಡಿದ ಕಾರಣ ಮೊಮೊಟಾ ಅವರನ್ನು ಅಮಾನತು ಮಾಡಲಾಗಿತ್ತು. ಹೀಗಾಗಿ ಅವರು 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಕಳೆದುಕೊಂಡಿದ್ದರು.

‘ನೆಪಗಳನ್ನು ಹೇಳುತ್ತಾ ವೈಫಲ್ಯವನ್ನು ಸಮರ್ಥಿಸಿಕೊಳ್ಳುವ ಜಾಯಮಾನ ನನ್ನದಲ್ಲ. ಯಾವುದಕ್ಕೂ ರಾಜಿಯಾಗದೆ ಕಠಿಣ ಪರಿಶ್ರಮದಿಂದ ಎಲ್ಲವನ್ನೂ ಸಾಧಿಸಬೇಕು. ಲಾಕ್‌ಡೌನ್‌ನಿಂದಾಗಿ ಅಭ್ಯಾಸದಿಂದ ದೂರ ಉಳಿಯಬೇಕಾಗಿದೆ. ಹಾಗಂತ ಸುಮ್ಮನೆ ಕುಳಿತಿಲ್ಲ. ಈ ಹಿಂದೆ ಆಡಿದ ಪಂದ್ಯಗಳಲ್ಲಿ ಮಾಡಿರುವ ತಪ್ಪುಗಳನ್ನು ಗುರುತಿಸಿ ಅವುಗಳನ್ನು ತಿದ್ದಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT