ಬೆಂಗಳೂರು: ಕೇಂದ್ರ ಸರ್ಕಾರ ‘ಖೇಲೋ ಇಂಡಿಯಾ’ ಯೋಜನೆಯಡಿ ರಾಜ್ಯದ ನಾಲ್ಕು ಕಡೆಗಳಲ್ಲಿ ಕ್ರೀಡಾಂಗಣಗಳ ನಿರ್ಮಾಣಕ್ಕಾಗಿ ₹19.50 ಕೋಟಿ ಬಿಡುಗಡೆ ಮಾಡಿದೆ.

ಉಡುಪಿ ಜಿಲ್ಲೆಯ ಕಾರ್ಕಳ, ಚಿಕ್ಕ ಮಗಳೂರು ಹಾಗೂ ಕೊಪ್ಪಳದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ಒಳಾಂಗಣ ಮತ್ತು ವಿವಿಧೋದ್ದೇಶಗಳ ಕ್ರೀಡಾಂಗಣಗಳು ನಿರ್ಮಾಣವಾಗಲಿವೆ.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಸಿ.ಟಿ.ರವಿ ಅವರು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಇದರ ಪರಿಣಾಮವಾಗಿ, ರಾಜ್ಯದಲ್ಲಿ ಒಳಾಂಗಣ ಮತ್ತು ವಿವಿಧೋದ್ದೇಶಗಳ ಕ್ರೀಡಾಂಗಣಗಳನ್ನು ನಿರ್ಮಿಸಲು ಕೇಂದ್ರ ಸಮ್ಮತಿ ನೀಡಿದೆ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸುಮಾರು ₹3.50 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, ಚಿಕ್ಕಮಗ ಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ₹4.50 ಕೋಟಿ ವೆಚ್ಚದಲ್ಲಿ ವಿವಿಧೋದ್ದೇಶ ಬಳಕೆಯ ಒಳಾಂಗಣ ಸಭಾಂಗಣ, ಚಿಕ್ಕಮಗಳೂರಿನಲ್ಲಿ ₹ 7 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣ, ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ₹4.50 ಕೋಟಿ ವೆಚ್ಚದಲ್ಲಿ ವಿವಿಧೋದ್ದೇಶ ಹಾಲ್ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವಾಲಯ ಅಧೀನ ಕಾರ್ಯದರ್ಶಿ ಒ.ಪಿ.ಚಂಚಕ್ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.