ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾರ್ಚ್‌ನಲ್ಲಿ ಖೇಲೊ ಇಂಡಿಯಾ ಕ್ರೀಡಾಕೂಟ

Last Updated 15 ಜುಲೈ 2021, 11:45 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವವಿದ್ಯಾಲಯ ಮಟ್ಟದ ಖೇಲೊ ಇಂಡಿಯಾ ಕ್ರೀಡಾಕೂಟದ ಎರಡನೇ ಆವೃತ್ತಿಗೆ ಮುಂದಿನ ವರ್ಷ ಮಾರ್ಚ್ ಐದರಂದು ಚಾಲನೆ ಸಿಗಲಿದೆ.

ಉಪಮುಖ್ಯಮಂತ್ರಿ ಸಿ. ಅಶ್ವತ್ಥನಾರಾಯಣ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಅವರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ₹ 40 ಕೋಟಿ ವೆಚ್ಚ ಅಂದಾಜಿಸಲಾಗಿದ್ದು ರಾಜ್ಯ ಸರ್ಕಾರ ₹ 20 ಕೋಟಿ ಅನುದಾನ ನೀಡಲಿದೆ ಎಂದು ಸಚಿವರು ತಿಳಿಸಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿರುವ ಕೂಟ 12 ದಿನ ನಡೆಯಲಿದ್ದು 18 ಸ್ಪರ್ಧೆಗಳು ಇರುತ್ತವೆ. 158 ವಿಶ್ವವಿದ್ಯಾಲಯಗಳಿಂದ 3182 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು ತಾಂತ್ರಿಕ ಅಧಿಕಾರಿಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಆರುಸಾವಿರ ಮಂದಿ ಭಾಗವಹಿಸಲಿದ್ದಾರೆ‌ ಎಂದು ಸಭೆಯಲ್ಲಿ ತಿಳಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲೀನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ,ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ ಅಧ್ಯಕ್ಷ ಕೆ.ಗೋವಿಂದರಾಜು, ಖೇಲೊ ಇಂಡಿಯಾದ ಮುಖ್ಯಸ್ಥರು, ರಾಜೀವಗಾಂಧಿ ವಿಶ್ವವಿದ್ಯಾಲಯ ಮತ್ತು ಜೈನ್ ವಿಶ್ವವಿದ್ಯಾಲಯದ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT