ಬಂಗಾರಪೇಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಒಟ್ಟು 31.46 ಹೆಕ್ಟೇರ್ ಪ್ರದೇಶದ ವಿವಿಧ ತೋಟಗಾರಿಕಾ ಬೆಳೆಗಳು ನೆಲಕಚ್ಚಿವೆ. ಪ್ರಾಥಮಿಕ ಅಂದಾಜಿನ ಪ್ರಕಾರ ರೈತರಿಗೆ ಒಟ್ಟು ₹15.53 ಲಕ್ಷಕ್ಕೂ ಅಧಿಕ ಆರ್ಥಿಕ ನಷ್ಟ ಸಂಭವಿಸಿದೆ.

ಬಿರುಗಾಳಿಯ ರಭಸಕ್ಕೆ ಬೂದಿಕೋಟೆ ಮತ್ತು ಕಾಮಸಮುದ್ರ ಹೋಬಳಿ ವ್ಯಾಪ್ತಿಯಲ್ಲಿ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸುಮಾರು 70ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದರಿಂದಾಗಿ ಬೆಸ್ಕಾಂ ಇಲಾಖೆಗೆ ₹6 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಹಲವು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಇನ್ನು ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಸುವ ಕಂಬಗಳು ಇದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬಿದ್ದಿವೆ.

ಗಾಳಿಯ ಹೊಡೆತಕ್ಕೆ ರಸ್ತೆ ಬದಿಯ 30ಕ್ಕೂ ಹೆಚ್ಚು ಬೃಹತ್ ಮರಗಳು ಬುಡಸಮೇತ ಉರುಳಿ ಬಿದ್ದಿವೆ. ಭೀಕರ ಗಾಳಿಗೆ ಶೇ.70 ರಷ್ಟು ಮಾವು ತೋಟಗಳಲ್ಲೇ ಉದುರಿ ಬಿದ್ದಿದ್ದು, ಒಟ್ಟು 14 ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದೆ. ಇದರಿಂದ ರೈತರಿಗೆ ₹7 ಲಕ್ಷ ನಷ್ಟ ಸಂಭವಿಸಿದೆ. ಕಟಾವಿನ ಹಂತದಲ್ಲಿದ್ದ 10.78 ಹೆಕ್ಟೇರ್ ವಿಸ್ತೀರ್ಣದ ಬಾಳೆ ತೋಟ ಸಂಪೂರ್ಣ ನೆಲಕಚ್ಚಿದ್ದು, ₹5.39 ಲಕ್ಷ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

2 ಹೆಕ್ಟೇರ್ ಪ್ರದೇಶದಲ್ಲಿದ್ದ ಹೂವಿನ ತೋಟಗಳು ಬಿರುಗಾಳಿಗೆ ಸಿಲುಕಿ ಹಾಳಾಗಿದ್ದು, ₹80 ಸಾವಿರ ನಷ್ಟ ಸಂಭವಿಸಿದೆ. 0.86 ಹೆಕ್ಟೇರ್ ಪ್ರದೇಶದಲ್ಲಿದ್ದ ಟೊಮೊಟೊ ಬೆಳೆ ಮಣ್ಣು ಪಾಲಾಗಿದೆ. ಮಳೆಯಿಂದ ತೀವ್ರ ನಷ್ಟ ಅನುಭವಿಸಿರುವ ಜಮೀನುಗಳಿಗೆ ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಜಂಟಿ ತಂಡ ಶನಿವಾರ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿತು. ಬೆಳೆ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದ ರೈತರಿಗೆ ಅಧಿಕಾರಿಗಳು ಧೈರ್ಯ ತುಂಬಿದರು.

ಹಾನಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಾಗುತ್ತಿದೆ. ಬಾಧಿತ ರೈತರಿಗೆ ನಿಯಮಾನುಸಾರ ಗರಿಷ್ಠ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-18-1151723213

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.