ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಬ್ಲ್ಯುಎಫ್‌ ರ‍್ಯಾಂಕಿಂಗ್‌: ಲಕ್ಷ್ಯ ಉತ್ತಮ ಸಾಧನೆ

ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್‌ ರಣಕಿರೆಡ್ಡಿ– ಚಿರಾಗ್‌ ಶೆಟ್ಟಿ ಜಿಗಿತ
Last Updated 18 ಜನವರಿ 2022, 13:47 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಯುವ ಆಟಗಾರ ಲಕ್ಷ್ಯ ಸೇನ್ ಅವರು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ (ಬಿಡಬ್ಲ್ಯುಎಫ್) ರ‍್ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ 13ನೇ ಸ್ಥಾನಕ್ಕೇರಿದ್ದಾರೆ. ಇತ್ತೀಚೆಗೆ ಅವರು ಇಂಡಿಯಾ ಓಪನ್ ಟೂರ್ನಿಯ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದ್ದರು.

ಇಂಡಿಯಾ ಓಪನ್ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ– ಚಿರಾಗ್‌ ಶೆಟ್ಟಿ ಕೂಡ ಎಂಟನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಏಳನೇ ಸ್ಥಾನ ಮತ್ತು ಪುರುಷರ ಸಿಂಗಲ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್ 10ನೇ ಸ್ಥಾನಗಳಲ್ಲಿ ಮುಂದುವರಿದಿದ್ದಾರೆ. ಮಹಿಳೆಯರ ಸಿಂಗಲ್ಸ್‌ನಲ್ಲಿ ಚೀನಾ ತೈಪೆಯ ತೈ ಜು ಯಿಂಗ್‌ ಅಗ್ರಸ್ಥಾನದಲ್ಲಿದ್ದಾರೆ. ಪುರುಷರ ವಿಭಾಗದಲ್ಲಿ ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್ಸೆನ್‌ ಮೊದಲ ಕ್ರಮಾಂಕದಲ್ಲಿದ್ದಾರೆ.

ಲಕ್ಷ್ಯ ಸೇನ್‌ ಈ ಮೊದಲು 17ನೇ ಸ್ಥಾನದಲ್ಲಿದ್ದರು. ಸದ್ಯ ಅವರ ಬಳಿ66,470 ಪಾಯಿಂಟ್‌ಗಳಿವೆ. ಹಾಲಿ ವಿಶ್ವ ಚಾಂಪಿಯನ್‌ ಸಿಂಗಪುರದ ಲೋಹ್ ಕೀನ್ ಯಿವ್‌ 12ನೇ ಸ್ಥಾನದಲ್ಲಿದ್ದಾರೆ.

ಬಿ.ಸಾಯಿ ಪ್ರಣೀತ್‌ 18ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT