ಬೆಂಗಳೂರು: ಕೋವಿಡ್–19 ಪರಿಣಾಮ ರಾಜ್ಯದಲ್ಲಿ ಪ್ಯಾರಾಲಿಂಪಿಕ್ ಕ್ರೀಡಾಪಟುಗಳು ಸಂಕಷ್ಟದಲ್ಲಿ ಇದ್ದು ಅವರಿಗೆ ರಾಜ್ಯ ಸರ್ಕಾರ ಹಣಕಾಸು ನೆರವಿನ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯದ ವಿಕಲಚೇತನ ಕ್ರೀಡಾಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸುಮಾರು 600ಕ್ಕೂ ಪ್ಯಾರಾ ಕ್ರೀಡಾಪಟುಗಳಿದ್ದು ಇವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಪ್ರಸ್ತುತ ಕೊರೊನಾ ವೈರಸ್ ಪರಿಣಾಮ ದೇಶದಲ್ಲಿ ಲಾಕ್‌ಡೌನ್ ವಿಧಿಸಿರುವುದರಿಂದ ಅಂಗವಿಕಲ ಕ್ರೀಡಾಪಟುಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಜ್ಯದ ಬಹುತೇಕ ಪ್ಯಾರಾಪಟುಗಳು ಕ್ರೀಡೆಯನ್ನು ನಂಬಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಕಳೆದ ಮೂರು ತಿಂಗಳಿಂದ ಕ್ರೀಡಾ ಚಟುವಟಿಕೆಗಳು ನಡೆಯದೇ ಇರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಅಂಗವಿಕಲ ಕ್ರೀಡಾಪಟುಗಳ ಕಡೆ ಗಮನ ಹರಿಸಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶೇಷ ಹಣಕಾಸು ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಪ್ರಶಾಂತ್ ಕುಮಾರ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.