ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Paris Diamond League: ಲಾಂಗ್‌ಜಂಪ್‌ನಲ್ಲಿ ಭಾರತದ ಶ್ರೀಶಂಕರ್‌ಗೆ ಮೂರನೇ ಸ್ಥಾನ

Published 10 ಜೂನ್ 2023, 5:12 IST
Last Updated 10 ಜೂನ್ 2023, 5:12 IST
ಅಕ್ಷರ ಗಾತ್ರ

ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆದ ಪ್ರತಿಷ್ಠಿತ ಪ್ಯಾರಿಸ್ ಡೈಮಂಡ್ ಲೀಗ್ ಕೂಟದಲ್ಲಿ ಭಾರತದ ಲಾಂಗ್‌ಜಂಪ್ ಅಥ್ಲೀಟ್ ಮುರಳಿ ಶ್ರೀಶಂಕರ್ ಮೂರನೇ ಸ್ಥಾನ ಜಯಿಸಿದ್ದಾರೆ.

ಶುಕ್ರವಾರ ರಾತ್ರಿ ನಡೆದ ಕೂಟದಲ್ಲಿ ಸ್ಪರ್ಧಿಸಿದ 24 ವರ್ಷದ ಶ್ರೀಶಂಕರ್, ಮೂರನೇ ಪ್ರಯತ್ನದಲ್ಲಿ 8.09 ಮೀಟರ್ ಜಿಗಿದು ಸಾಧನೆ ಮಾಡಿದರು.

ಈ ಕೂಟದಲ್ಲಿ ಒಲಿಂಪಿಕ್ ಚಾಂಪಿಯನ್ ಗ್ರೀಸ್‌ನ ಮೆಲ್ಟಿಯಾಡಿಸ್ ಟೆಂಟೊಗ್ಲೂ 8.13 ಮೀ. ಮತ್ತು ಸ್ವಿಟ್ಜರ್‌ಲ್ಯಾಂಡ್‌ನ ಸೈಮನ್ ಎಹಮೆರ್ 8.11 ಮಿ. ಸಾಧನೆಯೊಂದಿಗೆ ಮೊದಲೆರಡು ಸ್ಥಾನಗಳನ್ನು ಗೆದ್ದಿದ್ದಾರೆ.

2022ರಲ್ಲಿ ಬರ್ಮಿಂಗ್‌ಹ್ಯಾಮ್ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಶ್ರೀಶಂಕರ್ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT