ಪ್ಯಾರಿಸ್: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಪ್ಯಾರಿಸ್ ಕೂಟದಿಂದ ಹೊರಬಿದ್ದಿದ್ದಾರೆ.
ಭಾನುವಾರ ನಡೆದ ಮಹಿಳೆಯರ ಬಾಕ್ಸಿಂಗ್ 75 ಕೆ.ಜಿ. ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲವ್ಲಿನಾ 1–4ರಿಂದ ಚೀನಾದ ಲಿ ಕ್ವಿಯಾನ್ ವಿರುದ್ಧ ಸೋಲನುಭವಿಸಿದರು.
ಲವ್ಲಿನಾ ಸೋಲಿನೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ ಬಾಕ್ಸಿಂಗ್‌ನಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ. ಶನಿವಾರ ತಡರಾತ್ರಿ ಪುರುಷರ 71 ಕೆ.ಜಿ ವಿಭಾಗದಲ್ಲಿ ನಿಶಾಂತ್ ದೇವ್ ಸೋಲನುಭವಿಸಿದ್ದರು.
ಪ್ಯಾರಿಸ್ ಕೂಟದಲ್ಲಿ ನಾಲ್ಕು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಪ್ರಬಲ ಸ್ಪರ್ಧಿಗಳು ಭಾರತವನ್ನು ಪ್ರತಿನಿಧಿಸಿದ್ದರು.