ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಮಲೇಷ್ಯಾ ಓಪನ್: ಪ್ರಣಯ್‌, ಲಕ್ಷ್ಯ ಸೇನ್‌ ಮೇಲೆ ಹೆಚ್ಚಿದ ನಿರೀಕ್ಷೆ

Published 8 ಜನವರಿ 2024, 20:34 IST
Last Updated 8 ಜನವರಿ 2024, 20:34 IST
ಅಕ್ಷರ ಗಾತ್ರ

ಕ್ವಾಲಾಲಂಪುರ: ಭಾರತದ ಅಗ್ರ ಆಟಗಾರರಾದ ಎಚ್.ಎಸ್.ಪ್ರಣಯ್ ಮತ್ತು ಲಕ್ಷ್ಯ ಸೇನ್ ಸೇರಿದಂತೆ ಪ್ರಮುಖರು ಮಂಗಳವಾರ ಇಲ್ಲಿ ಆರಂಭವಾಗಲಿರುವ ಮಲೇಷ್ಯಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿದ್ದಾರೆ.  

ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ನಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ವಿಶ್ವದ 8ನೇ ಕ್ರಮಾಂಕದ ಪ್ರಣಯ್ ಒಲಿಂಪಿಕ್ಸ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರು ಡೆನ್ಮಾರ್ಕ್‌ನ ಆ್ಯಂಡರ್ಸ್ ಆಂಟೊನ್ಸೆನ್ ಅವರನ್ನು ಎದುರಿಸುವರು. 

ಲಕ್ಷ್ಯ ಸೇನ್ ಮತ್ತು ಕಿದಂಬಿ ಶ್ರೀಕಾಂತ್ ಅವರ ಮೇಲೂ ಎಲ್ಲರ ಕಣ್ಣು ನೆಟ್ಟಿದೆ. ಸೇನ್ ಮತ್ತು ಶ್ರೀಕಾಂತ್ ಅವರು ಮೊದಲ ಸುತ್ತಿನಲ್ಲಿ ಕ್ರಮವಾಗಿ ಚೀನಾದ ವೆಂಗ್ ಹಾಂಗ್ ಯಾಂಗ್ ಮತ್ತು ಇಂಡೊನೇಷ್ಯಾದ ಆರನೇ ಕ್ರಮಾಂಕದ ಜೊನಾಟನ್ ಕ್ರಿಸ್ಟಿ ಅವರನ್ನು ಎದುರಿಸಲಿದ್ದಾರೆ.

ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಉತ್ತಮ ಲಯದಲ್ಲಿ ಇದ್ದಾರೆ. ಮಹಿಳಾ ಡಬಲ್ಸ್ ಜೋಡಿ ಅಶ್ವಿನಿ ಪೊನ್ನಪ್ಪ ಮತ್ತು ತನಿಶಾ ಕ್ರಾಸ್ಟೊ, ಈ ಋತುವಿನಲ್ಲಿ ಸುಧಾರಿತ ಪ್ರದರ್ಶನದ ವಿಶ್ವಾಸದಲ್ಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT