ಬೆಂಗಳೂರು: ಮಂಡ್ಯದ ಅಥ್ಲೀಟ್ ವಿಜಯಕುಮಾರಿ ಜಿ.ಕೆ. ಅವರು ತಿರುವನಂತಪುರದಲ್ಲಿ ಶನಿವಾರ ನಡೆದ ಏಳನೇ ಇಂಡಿಯನ್ ಓಪನ್ ಕೂಟದ ಮಹಿಳೆಯರ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿಜಯಕುಮಾರಿ ಅವರು 53.55 ಸೆಕೆಂಡ್ಗಳಲ್ಲಿ ಗುರಿ ತಲುಪಿದರು. ತಮಿಳುನಾಡಿನ ವಿದ್ಯಾ ರಾಮರಾಜ್ (53.31ಸೆ) ಚಿನ್ನದ ಸಾಧನೆ ಮಾಡಿದರು. ಒಎನ್ಜಿಸಿ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪೂವಮ್ಮ ರಾಜು (53.61ಸೆ) ಕಂಚಿನ ಪದಕ ತಮ್ಮದಾಗಿಸಿಕೊಂಡರು.

‘ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವುದು ಖುಷಿ ತಂದಿದೆ. ನನ್ನ ಸಂಕಷ್ಟದ ಸಮಯದಲ್ಲಿ ಧೈರ್ಯ ತುಂಬಿ ಆರ್ಥಿಕ ಸಹಾಯ ಮಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಚಿರಋಣಿಯಾಗಿದ್ದೇನೆ. ಅವರ ಬೆಂಬಲವಿಲ್ಲದಿದ್ದರೆ ಈ ಸಾಧನೆ ಸಾಧ್ಯವಾಗುತ್ತಿರಲಿಲ್ಲ’ ಎಂದು ವಿಜಯಕುಮಾರಿ ಪ್ರತಿಕ್ರಿಯಿಸಿದ್ದಾರೆ.

ಕೆ.ಆರ್. ಪೇಟೆ ತಾಲ್ಲೂಕಿನ ಗೌಡೇನಹಳ್ಳಿ ಮೂಲದ ವಿಜಯಕುಮಾರಿ ಅವರು ಆರ್ಥಿಕ ಮುಗ್ಗಟ್ಟು ಮತ್ತು ಗಾಯದ ಸಮಸ್ಯೆಯಿಂದ ಕ್ರೀಡೆಯಿಂದ ದೂರ ಸರಿಯುವ ನಿರ್ಧಾರಕ್ಕೆ ಬಂದಿದ್ದರು. ಆಕೆಯ ಕಷ್ಟಕ್ಕೆ ಸ್ಪಂದಿಸಿದ್ದ ಡಿ.ಕೆ. ಶಿವಕುಮಾರ್ ಅವರು ಸರ್ಕಾರದಿಂದ ₹ 10 ಲಕ್ಷ ಪ್ರೋತ್ಸಾಹಧನ ಘೋಷಿಸಿದ್ದರು. ಆ ಪೈಕಿ ಮೊದಲ ಕಂತಿನ ₹ 5 ಲಕ್ಷ ಈಗಾಗಲೇ ಹಸ್ತಾಂತರಿಸಿದ್ದರು. ಇದು ವಿಜಯಕುಮಾರಿ ಅವರ ತರಬೇತಿ ಮತ್ತು ಚಿಕಿತ್ಸೆಗೆ ನೆರವಾಗಿದೆ.

ಏಕಲವ್ಯ ಮತ್ತು ರಾಜ್ಯೋತ್ಸವ ಪ್ರಶಸ್ತಿಗಳಿಗೆ ಭಾಜನರಾಗಿರುವ ಅವರು, ಮುಂದಿನ ದಿನಗಳಲ್ಲಿ ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ಗಳಲ್ಲಿ ಭಾಗವಹಿಸಿ ದೇಶಕ್ಕೆ ಪದಕ ತರುವ ಗುರಿಯನ್ನು ಹೊಂದಿದ್ದಾರೆ.

ವಿಜಯಕುಮಾರಿ ಅವರ ಕಠಿಣ ಶ್ರಮ, ಛಲ ಮತ್ತು ಸರ್ಕಾರದ ಬೆಂಬಲವು ಇತರ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.