ನವದೆಹಲಿ: ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ಪುರುಷರ ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಪಾಕಿಸ್ತಾನದ ತಂಡ ಸ್ಪರ್ಧಿಸುವುದನ್ನು ತಡೆಯಲಾಗುವುದಿಲ್ಲ ಎಂದು ಕ್ರೀಡಾ ಸಚಿವಾಲಯದ ಮೂಲಗಳು ಇಂದು (ಗುರುವಾರ) ತಿಳಿಸಿವೆ.

ಭಾರತದಲ್ಲಿ ನಡೆಯುವ ಬಹುರಾಷ್ಟ್ರೀಯ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಯಾವುದೇ ತಂಡವನ್ನು ನಾವು ವಿರೋಧಿಸುವುದಿಲ್ಲ. ಆದರೆ ದ್ವಿಪಕ್ಷೀಯ ಟೂರ್ನಿಗಳು ಇದಕ್ಕಿಂತ ಭಿನ್ನವಾಗಿವೆ ಎಂದು ಹೇಳಿದೆ.

ಆಯೋಜನೆಯಿಂದ ನಾವು ಹಿಂದೆ ಸರಿಯಬಾರದು ಎಂದು ಅಂತರರಾಷ್ಟ್ರೀಯ ಕ್ರೀಡೆ ಬಯಸುತ್ತದೆ. ರಷ್ಯಾ ಹಾಗೂ ಉಕ್ರೇನ್ ಯುದ್ಧ ನಡೆಸುತ್ತಿದ್ದರೂ ಬಹುರಾಷ್ಟ್ರೀಯ ಕ್ರೀಡೆಯಲ್ಲಿ ಕಾಣಿಸಿಕೊಳ್ಳುತ್ತಿದೆ ಎಂದು ತಿಳಿಸಿದೆ.

ಬಿಹಾರದ ರಾಜ್ಗೀರ್ನಲ್ಲಿ ಪುರುಷರ ಏಷ್ಯಾ ಕಪ್ ಹಾಕಿ ಟೂರ್ನಿಯು ಆಗಸ್ಟ್ 27ರಿಂದ ಸೆಪ್ಟೆಂಬರ್ 7ರವರೆಗೆ ನಡೆಯಲಿದೆ.

ಭಾರತದಲ್ಲಿ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಪಾಕಿಸ್ತಾನಕ್ಕೆ ಅವಕಾಶ ನೀಡಲಾಗುತ್ತದೆಯೇ ಎಂದು ಕೇಳಿದಾಗ ಬಿಸಿಸಿಐ ಇನ್ನಷ್ಟೇ ಸಂಪರ್ಕಿಸಬೇಕಿದೆ. ಅವರು ನಮ್ಮನ್ನು ಸಂಪರ್ಕಿಸಿದಾಗ ಈ ಕುರಿತು ಪರಾಮರ್ಶೆ ನಡೆಸಲಿದ್ದೇವೆ ಎಂದು ಹೇಳಿದೆ.
.ಪಾಕಿಸ್ತಾನ ವಾಯುಪಡೆಯ ಮುಖ್ಯಸ್ಥರಿಂದ ಅಮೆರಿಕ ಪ್ರವಾಸ.ಇರಾನ್ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್ ದಾಳಿ: ಪಾಕಿಸ್ತಾನ ಖಂಡನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.