ನವದೆಹಲಿ: ಮೀರಾಬಾಯಿ ಚಾನು, ಥಾಯ್ಲೆಂಡ್ನ ಪಟ್ಟಾಯದಲ್ಲಿ ಇದೇ 18ರಿಂದ 27ರ ವರೆಗೆ ನಡೆಯಲಿರುವ ವೇಟ್ಲಿಫ್ಟಿಂಗ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳುವ ಭಾರತ ತಂಡವನ್ನು ಮುನ್ನಡೆಸುವರು.

ಭಾರತ ತಂಡದಲ್ಲಿ ನಾಲ್ವರು ಮಹಿಳೆಯರು ಮತ್ತು ಮೂವರು ಪುರುಷ ವೇಟ್ ಲಿಫ್ಟರ್ಗಳಿದ್ದಾರೆ. ತಂಡ ಈಗಾಗಲೇ ಥಾಯ್ಲೆಂಡ್ನಲ್ಲಿ ಅಭ್ಯಾಸ ನಡೆಸುತ್ತಿದೆ.

ಈ ಹಿಂದೆ ವಿಶ್ವ ಚಾಂಪಿಯನ್ ಷಿಪ್ನಲ್ಲಿ ಚಿನ್ನ ಗೆದ್ದಿರುವ ಮೀರಾ 49 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲಿದ್ದು ಕಾಮನ್ವೆಲ್ತ್ ಚಾಂಪಿಯನ್ಷಿಪ್ ನಲ್ಲಿ ಚಿನ್ನದ ಪದಕ ಗಳಿಸಿರುವ ಜಿಲಿ ದಾಲಾಬೆಹರಾ 45 ಕೆಜಿ ವಿಭಾಗದಲ್ಲಿ ಕಣಕ್ಕೆ ಇಳಿಯಲಿದ್ದಾರೆ.

ಯೂಥ್ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದಿರುವ ಜೆರೆಮಿ ಲಾಲ್ರಿನ್ನುಂಗ (67 ಕೆಜಿ) ಪುರುಷರ ವಿಭಾಗದ ಪ್ರಮುಖ ಆಕರ್ಷಣೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.