ಚಂಡೀಗಢ: ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ಶೂಟರ್ ನಮನ್‌ವೀರ್ ಸಿಂಗ್ ಬ್ರಾರ್ ಅವರು ಮೊಹಾಲಿಯಲ್ಲಿರುವ ತಮ್ಮ ಮನೆಯಲ್ಲಿ ಸೋಮವಾರ ನಿಗೂಢವಾಗಿ ಸಾವಿಗೀಡಾಗಿದ್ದಾರೆ. 28 ವರ್ಷದ ನಮನ್‌ವೀರ್ ದೇಹದಲ್ಲಿ ಗುಂಡು ತಾಗಿದ ಗಾಯ ಇದೆ ಎಂದು ಮೊಹಾಲಿಯ ಉಪ ಪೊಲೀಸ್ ಆಯುಕ್ತ ಗುರುಶೇರ್ ಸಿಂಗ್ ಸಂಧು ತಿಳಿಸಿದ್ದಾರೆ.

ನಮನ್‌ವೀರ್ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು ಆಕಸ್ಮಿಕವಾಗಿ ಗುಂಡು ತಾಗಿ ಸಾವಿಗೀಡಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಮೇಲೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಸಂಧು ತಿಳಿಸಿದ್ದಾರೆ.

ದಕ್ಷಿಣ ಕೊರಿಯಾದಲ್ಲಿ ನಡೆದಿದ್ದ ವಿಶ್ವವಿದ್ಯಾಲಯಗಳ ವಿಶ್ವಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದ ನಮನ್‌ವೀರ್ ಈ ವರ್ಷದ ಮಾರ್ಚ್‌ನಲ್ಲಿ ನವದೆಹಲಿಯಲ್ಲಿ ನಡೆದಿದ್ದ ಐಎಸ್‌ಎಸ್‌ಎಫ್ ವಿಶ್ವಕಪ್ ಟೂರ್ನಿಯಲ್ಲಿ ಕನಿಷ್ಠ ಅರ್ಹತಾ ಸ್ಕೋರ್ ವಿಭಾಗದಲ್ಲಿ ಸ್ಪರ್ಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.