ಉಜಿರೆ: ದೆಹಲಿಯಲ್ಲಿ ನಡೆದ ಏಷ್ಯಾ ಮಟ್ಟದ ಅಂತರಾಷ್ಟ್ರೀಯ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಎಸ್ಡಿಎಂ ಕಾಲೇಜು ವಿದ್ಯಾರ್ಥಿಗಳು ಆರು ಚಿನ್ನದ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ದೆಹಲಿ ವಿಶ್ವವಿದ್ಯಾಲಯ ಕ್ರೀಡಾ ಸಂಕೀರ್ಣದಲ್ಲಿ ನಡೆದ ಸ್ಪರ್ಧೆಯಲ್ಲಿ ಕಾಲೇಜಿನ ದರ್ಶನ್ ಡಿ.ಎಸ್ ನಾಲ್ಕು ಮತ್ತು ದೀಕ್ಷಾ ಎರಡು ಪದಕಗಳನ್ನು ಜಯಿಸಿದ್ದಾರೆ.

ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿರುವ ದರ್ಶನ್, 60 ಕೆ.ಜಿ ಒಳಗಿನ ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಸಿದ್ದರು. ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ದೀಕ್ಷಾ, 44 ಕೆಜಿ ಒಳಗಿನ ಜೂನಿಯರ್ ವಿಭಾಗದಲ್ಲಿ ಕಣಕ್ಕಿಳಿದಿದ್ದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಅಭಿನಂದಿಸಿದೆ.

ದರ್ಶನ್ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕ್ಯಾಲಿಸ್ಥೆನಿಕ್ಸ್ ಸ್ಟ್ರೀಟ್ ಲಿಫ್ಟಿಂಗ್ ನ್ಯಾಷನಲ್ಸ್ 2026ನಲ್ಲಿ ಓಪನ್ ಸ್ಟ್ರೀಟ್ ಲಿಫ್ಟಿಂಗ್ ವಿಭಾಗದಲ್ಲಿ 7ನೇ ಸ್ಥಾನ, ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಆರ್ಮ್ ರೆಸ್ಲಿಂಗ್ ಚಾಂಪಿಯನ್ಶಿಪ್ನ 60 ಕೆ.ಜಿ ವಿಭಾಗದಲ್ಲಿ 9ನೇ ಸ್ಥಾನ ಪಡೆದಿದ್ದರು. ಕಳೆದ ಬಾರಿ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕವನ್ನೂ ಗೆದ್ದಿದ್ದರು.

ದೀಕ್ಷಾ ಅವರು ಇತ್ತೀಚಿಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಜಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.