ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾ ಅಥ್ಲೆಟಿಕ್ಸ್‌: ಸುಮಿತ್, ಪುಷ್ಪೇಂದ್ರ ವಿಶ್ವದಾಖಲೆ

Published 7 ಮೇ 2023, 3:19 IST
Last Updated 7 ಮೇ 2023, 3:19 IST
ಅಕ್ಷರ ಗಾತ್ರ

ಬೆಂಗಳೂರು: ಸುಮಿತ್‌ ಅಂತಿಲ್‌ ಮತ್ತು ಪುಷ್ಪೇಂದ್ರ ಸಿಂಗ್‌ ಅವರು ಇಲ್ಲಿ ನಡೆಯುತ್ತಿರುವ ಇಂಡಿಯನ್‌ ಓಪನ್‌ ಪ್ಯಾರಾ ಅಥ್ಲೆಟಿಕ್ಸ್‌ ಇಂಟರ್‌ನ್ಯಾಷನಲ್‌ ಚಾಂಪಿಯನ್‌ಷಿಪ್‌ನಲ್ಲಿ ವಿಶ್ವದಾಖಲೆ ಮಾಡಿದರು.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೂಟದಲ್ಲಿ ಶನಿವಾರ ಸುಮಿತ್‌ ಅವರು ಎಫ್‌64 ವಿಭಾಗದ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ 70.17 ಮೀ. ದೂರ ಸಾಧನೆ ಮಾಡಿದರು. ಈ ಮೂಲಕ ತಮ್ಮದೇ ಹೆಸರಿನಲ್ಲಿದ್ದ ವಿಶ್ವದಾಖಲೆ (68.62 ಮೀ.) ಉತ್ತಮಪಡಿಸಿಕೊಂಡರು.

ಪುಷ್ಪೇಂದ್ರ ಅವರು ಎಫ್‌43 ವಿಭಾಗದ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ 61.60 ಮೀ. ಸಾಧನೆಯೊಂದಿಗೆ ವಿಶ್ವದಾಖಲೆ ಸ್ಥಾಪಿಸಿದರು.

ಈ ಸಾಧನೆ ಮೂಲಕ ಇವರಿಬ್ಬರು ಇದೇ ವರ್ಷ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ಗೆ ಅರ್ಹತೆ ಗಳಿಸಿದರು.

ನೀರಜ್‌ ಯಾದವ್‌ ಅವರು ಎಫ್‌55 ವಿಭಾಗದ ಡಿಸ್ಕಸ್‌ ಥ್ರೋ ಸ್ಪರ್ಧೆಯಲ್ಲಿ 38.51 ಮೀ. ಸಾಧನೆ ಮೂಲಕ ತಮ್ಮದೇ ಹೆಸರಿನಲ್ಲಿದ್ದ ಏಷ್ಯನ್‌ ದಾಖಲೆ ಉತ್ತಮಪಡಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT