ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ಯಾರಾಲಿಂಪಿಕ್‌ನ ಕಂಚಿನ ಪದಕ ವಿಜೇತ ಶರದ್ ಕುಮಾರ್‌ಗೆ ಹೃದಯ ಸಮಸ್ಯೆ

Last Updated 23 ಸೆಪ್ಟೆಂಬರ್ 2021, 12:21 IST
ಅಕ್ಷರ ಗಾತ್ರ

ನವದೆಹಲಿ: ಟೋಕಿಯೊ 2020 ಪ್ಯಾರಾಲಿಂಪಿಕ್ಸ್ ಕಂಚಿನ ಪದಕ ವಿಜೇತ ಶರದ್ ಕುಮಾರ್ ಹೃದಯದಲ್ಲಿ ಊತ ಇರುವುದು ಪತ್ತೆಯಾಗಿದೆ. ಅವರನ್ನು ಎರಡು ದಿನಗಳ ಹಿಂದೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ದಾಖಲಿಸಲಾಗಿತ್ತು.

ಎದೆಯಲ್ಲಿ ನೋವು ಕಾಣಿಸಿಕೊಂಡ ನಂತರ ಶರದ್‌ ಕುಮಾರ್‌ ಅವರನ್ನು ಏಮ್ಸ್‌ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರ ಹೃದಯದಲ್ಲಿ ಊತ ಇರುವುದು ಪತ್ತೆಯಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಫೋಟೊವನ್ನು ಟ್ವಿಟ್‌ ಮಾಡಿಕೊಂಡಿರುವ ಶರದ್‌ ಕುಮಾರ್‌, 'ಕಠಿಣ ಸಮಯವು ನಮ್ಮನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದೇನೆ' ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಾಲಿಂಪಿಕ್ಸ್‌ನ ಪುರುಷರ ಹೈ ಜಂಪ್‍ನಲ್ಲಿ ಶರದ್‍ ಕುಮಾರ್ ಕಂಚಿನ ಪದಕ ಪಡೆದಿದ್ದಾರೆ.

2014 ಮತ್ತು 2018ರ ಪ್ಯಾರಾ ಏಷ್ಯನ್ ಗೇಮ್ಸ್‌ಗಳೆರಡಲ್ಲೂ ಸ್ವರ್ಣ ಪದಕದ ಸಾಧನೆಯನ್ನು ಶರದ್‍ ಕುಮಾರ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT