ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿದ್ದ ಈಜಿಪ್ಟ್ ಕುಸ್ತಿಪಟುವನ್ನು ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಫ್ರೆಂಚ್ ಪ್ರಾಸಿಕ್ಯೂಟರ್ ಕಚೇರಿ ಶುಕ್ರವಾರ ತಿಳಿಸಿದೆ.
ರಾಜಧಾನಿ ಪ್ಯಾರಿಸ್‌ನಲ್ಲಿ ಕೆಫೆಯೊಂದರ ಹೊರಗೆ ಮಹಿಳೆಯೊಬ್ಬರಿಗೆ ಶುಕ್ರವಾರ ಬೆಳಿಗ್ಗೆ ಕಿರುಕುಳ ನೀಡಿದ ಆರೋಪದಲ್ಲಿ 24 ವರ್ಷದ ಕ್ರೀಡಾಳುವನ್ನು ಬಂಧಿಸಲಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.
ಬಂಧಿತ ಅಥ್ಲೀಟ್ ಹೆಸರೇನು ಎಂಬುದನ್ನು ಬಹಿರಂಗಪಡಿಸಿಲ್ಲ. ಆದರೆ, ಅವರು ಈಜಿಪ್ಟ್‌ನವರು. ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದರು ಎಂದು ತಿಳಿಸಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಈಜಿಪ್ಟ್ ಕುಸ್ತಿ ಫೆಡರೇಷನ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.