ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿದ್ದಾರೆ.
ಆದರೆ ಅಮನ್ ಅವರಿಗೆ ಮಗದೊಂದು ಅವಕಾಶ ಇರಲಿದ್ದು, ಕಂಚಿನ ಪದಕಕ್ಕಾಗಿ ಅಖಾಡಕ್ಕಿಳಿಯಲಿದ್ದಾರೆ.
ಇಂದು ರಾತ್ರಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ 21 ವರ್ಷದ ಅಮನ್ ಅವರು ಅಗ್ರ ಶ್ರೇಯಾಂಕಿತ ಜಪಾನ್‌ನ ರೇ ಹಿಗುಚಿ ವಿರುದ್ಧ 0-10ರ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.
ಈ ಮೊದಲು ಕ್ವಾರ್ಟರ್ ಫೈನಲ್‌ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಅಲ್ಬೇನಿಯಾದ ಜೆಲಿಮ್‌ಖಾನ್ ಅಬಕರೊವ್ ವಿರುದ್ಧ 12-0 ಅಂತರದ ಗೆಲುವು ದಾಖಲಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದರು.