ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Paris Olympics | 89.34 ಮೀಟರ್ ಜಾವೆಲಿನ್ ಎಸೆದು ಫೈನಲ್‌ಗೆ ಪ್ರವೇಶಿಸಿದ ನೀರಜ್

Published 6 ಆಗಸ್ಟ್ 2024, 10:21 IST
Last Updated 6 ಆಗಸ್ಟ್ 2024, 10:21 IST
ಅಕ್ಷರ ಗಾತ್ರ

ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಜಾವೆಲಿನ್ ಥ್ರೋ ವಿಭಾಗದಲ್ಲಿ ಹಾಲಿ ಚಾಂಪಿಯನ್ ಭಾರತದ ನೀರಜ್ ಚೋಪ್ರಾ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಇಂದು ನಡೆದ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ 89.34 ಮೀಟರ್ ಜಾವೆಲಿನ್ ಎಸೆದು ನೀರಜ್ ಅಮೋಘ ಸಾಧನೆ ಮಾಡಿದರು.

ಇದು ಪ್ರಸಕ್ತ ಆವೃತ್ತಿಯಲ್ಲಿ ನೀರಜ್ ಅವರ ಶ್ರೇಷ್ಠ ಸಾಧನೆಯಾಗಿದೆ. ಆ ಮೂಲಕ ಮೂರು ವರ್ಷಗಳ ಹಿಂದೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಯಿಸಿದ್ದ ಚಿನ್ನದ ಪದಕವನ್ನು ಇಲ್ಲಿಯೂ ಉಳಿಸಿಕೊಳ್ಳುವ ಛಲದಲ್ಲಿದ್ದಾರೆ.

ನೀರಜ್ ಚೋಪ್ರಾ ಅವರು, ಟೋಕಿಯೊ ಒಲಿಂಪಿಕ್ಸ್‌ನಲ್ಲಿ 87.58 ಮೀಟರ್ ಜಾವೆಲಿನ್ ಎಸೆದು ಚಿನ್ನ ಜಯಿಸಿದ್ದರು. ಆ ಮೂಲಕ ಒಲಿಂಪಿಕ್ಸ್ ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟುವೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಪ್ರಭಾವಿ ಎನಿಸಿಕೊಳ್ಳುವಲ್ಲಿ ಜೇನಾ ವಿಫಲ...

ಭಾರತದವರೇ ಆದ ಕಿಶೋರ್ ಜೇನಾ ಪ್ರಭಾವಿ ಎನಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. 80.73 ಮೀಟರ್ ಜಾವೆಲಿನ್ ಎಸೆದಿರುವ ಜೇನಾ, ಅಂತಿಮ 12ರ ಸುತ್ತಿಗೆ ಪ್ರವೇಶಿಸುವ ಸಾಧ್ಯತೆ ಕ್ಷೀಣವೆನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT