ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಲಿಂಪಿಕ್ಸ್ ಫೈನಲ್‌ ತಲುಪಿದ ಮೊದಲ ಕುಸ್ತಿಪಟು ವಿನೇಶ್; ಹೆಮ್ಮೆಯ ಕ್ಷಣ: ಮೋದಿ

Published 16 ಆಗಸ್ಟ್ 2024, 7:07 IST
Last Updated 16 ಆಗಸ್ಟ್ 2024, 7:07 IST
ಅಕ್ಷರ ಗಾತ್ರ

ನವದೆಹಲಿ: ವಿನೇಶ್ ಫೋಗಟ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಫೈನಲ್‌ಗೆ ಪ್ರವೇಶಿಸಿದ ಭಾರತದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 'ಇದು ನಮ್ಮ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

78ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ಸ್ಪರ್ಧಿಸಿ ತವರಿಗೆ ಮರಳಿರುವ ಭಾರತದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಸಂವಾದ ನಡೆಸಿದರು.

ಈ ವೇಳೆ ವಿನೇಶ್ ಫೋಗಟ್ ಸಾಧನೆ ಕುರಿತು ಪ್ರಧಾನಿ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಮಹಿಳೆಯರ 50 ಕೆ.ಜಿ. ಕುಸ್ತಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಅವರು ದೇಹತೂಕದಲ್ಲಿ 100 ಗ್ರಾಂ ಹೆಚ್ಚಾಗಿದ್ದ ಕಾರಣಕ್ಕೆ ಅನರ್ಹಗೊಂಡಿದ್ದರು. ಇದರಿಂದ ಭಾರತಕ್ಕೆ ಪದಕ ನಷ್ಟವಾಗಿತ್ತು. ಇದರಿಂದ ವಿನೇಶ್‌ಗೆ ಆಘಾತವಾಗಿತ್ತಲ್ಲದೆ ಕ್ರೀಡಾಭಿಮಾನಿಗಳಲ್ಲಿ ನಿರಾಸೆಯನ್ನುಂಟು ಮಾಡಿತ್ತು.

ವಿನೇಶ್ ಪರ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಅಭಿಯಾನ ನಡೆದಿತ್ತು. ಬಳಿಕ ಕನಿಷ್ಠ ಬೆಳ್ಳಿ ಪದಕ ನೀಡಬೇಕು ಎಂಬ ವಿನೇಶ್ ಅವರ ಮೇಲ್ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಮಂಡಳಿ (ಸಿಎಎಸ್) ತಿರಸ್ಕರಿಸಿತ್ತು.

ಕಳೆದ ವರ್ಷ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಅವರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಕುಸ್ತಿಪಟುಗಳು ನಡೆಸಿದ್ದ ಮುಷ್ಕರದಲ್ಲಿ ವಿನೇಶ್ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT