ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Paris Olympics 2024: ಕುಸ್ತಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟ ವಿನೇಶಾ ಫೋಗಟ್

Published 6 ಆಗಸ್ಟ್ 2024, 17:35 IST
Last Updated 6 ಆಗಸ್ಟ್ 2024, 17:35 IST
ಅಕ್ಷರ ಗಾತ್ರ

ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಭಾರತದ ಕುಸ್ತಿಪಟು ವಿನೇಶಾ ಫೋಗಾಟ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಗೊಮೆಜ್ ಅವರನ್ನು 5-0 ಅಂತರದಿಂದ ಮಣಿಸಿ ಗೆಲುವಿನ ನಗೆ ಬೀರಿದರು.

ಒಲಿಂಪಿಕ್ಸ್ ಫೈನಲ್‌ ಪ್ರವೇಶಿಸಿದ ಭಾರತದ ಮೊದಲ ಮಹಿಳಾ ಕುಸ್ತಿಪಟುವೆಂಬ ಹೆಗ್ಗಳಿಕೆ ಅವರದ್ದಾಗಿದೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ನಾಲ್ಕನೇ ಪದಕ ಲಭಿಸುವುದು ನಿಚ್ಚಳವಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT