ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ 76 ಕೆ.ಜಿ. ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಕುಸ್ತಿಪಟು ರಿತಿಕಾ ಹೂಡಾ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.
ಮೊದಲ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ರಿತಿಕಾ ಅವರು ಹಂಗೇರಿಯ ಬರ್ನಾಡೆಟ್ ನ್ಯಾಗಿ ವಿರುದ್ಧ 12-2ರ ಅಂತರದಲ್ಲಿ ಗೆದ್ದಿದ್ದಾರೆ.
ರಿತಿಕಾ ಎದುರಾಳಿಗಿಂತಲೂ 10 ಅಂಕ ಮುನ್ನಡೆ ಗಳಿಸಿದ ಹಿನ್ನೆಲೆಯಲ್ಲಿ ರೆಫರಿ, ನಿಗದಿತ ಸಮಯಕ್ಕಿಂತಲೂ 29 ಸೆಕೆಂಡಿಗೂ ಮುನ್ನವೇ ಪಂದ್ಯವನ್ನು ಅಂತ್ಯಗೊಳಿಸಿದರು.
ಕ್ವಾರ್ಟರ್‌ನಲ್ಲಿ ರಿತಿಕಾ ಅವರಿಗೆ ಕಠಿಣ ಪೈಪೋಟಿ ಎದುರಾಗಲಿದ್ದು, ಅಗ್ರ ಶ್ರೇಯಾಂಕಿತೆ ಕಿರ್ಗಿಸ್ತಾನದ ಐಪೆರಿ ಮೆಡೆಟ್ ಸವಾಲನ್ನು ಎದುರಿಸಲಿದ್ದಾರೆ. ಈ ಪಂದ್ಯ ಇನ್ನೂ ಕೆಲವೇ ಹೊತ್ತಿನಲ್ಲಿ ನಡೆಯಲಿದೆ.
ಪುರುಷರ ಕುಸ್ತಿ ವಿಭಾಗದಲ್ಲಿ ಭಾರತದ ಏಕಮಾತ್ರ ಸ್ಪರ್ಧಿಯಾಗಿದ್ದ ಅಮನ್ ಸೆಹ್ರಾವತ್, ಶುಕ್ರವಾರ ಕಂಚಿನ ಪದಕ ಜಯಿಸಿದ್ದರು.