ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥ್ಲೆಟಿಕ್ಸ್ ದೇಶದೆಲ್ಲೆಡೆ ಅಪಾರ ಜನಪ್ರಿಯತೆ ಗಳಿಸುತ್ತಿದೆ: ಪ್ರಧಾನಿ ಮೋದಿ

Last Updated 23 ಆಗಸ್ಟ್ 2021, 11:18 IST
ಅಕ್ಷರ ಗಾತ್ರ

ನವದೆಹಲಿ: ಕೆನ್ಯಾದ ನೈರೋಬಿಯಲ್ಲಿ ನಡೆದ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತೀಯ ಅಥ್ಲೀಟ್‌ಗಳ ಅಮೋಘ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಮುಕ್ತಕಂಠದಿಂದ ಕೊಂಡಾಡಿದ್ದಾರೆ.

20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಯುವ ಸ್ಪರ್ಧಿಗಳು ಎರಡು ಬೆಳ್ಳಿ ಪದಕ ಹಾಗೂ ಒಂದು ಕಂಚಿನ ಪದಕ ಜಯಿಸಿದ್ದಾರೆ.

ಇದನ್ನೇ ಉಲ್ಲೇಖ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಥ್ಲೆಟಿಕ್ಸ್ ದೇಶದೆಲ್ಲೆಡೆ ಅಪಾರ ಜನಪ್ರಿಯತೆ ಗಳಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

'ದೇಶದಲ್ಲಿ ಅಥ್ಲೆಟಿಕ್ಸ್ ವೇಗ ಹಾಗೂ ಯಶಸ್ಸನ್ನು ಗಳಿಸುತ್ತಿದೆ. 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ನಮ್ಮ ಅಥ್ಲೀಟ್‌ಗಳು ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದಿದ್ದಾರೆ. ಅಥ್ಲೆಟಿಕ್ಸ್ ದೇಶದಲ್ಲಿ ಅಪಾರ ಜನಪ್ರಿಯತೆ ಗಳಿಸುತ್ತಿದ್ದು, ಇದು ಉತ್ತಮ ಸಂಕೇತವಾಗಿದೆ. ಕಠಿಣ ಪರಿಶ್ರಮ ವಹಿಸುತ್ತಿರುವ ನಮ್ಮ ಅಥ್ಲೀಟ್‌ಗಳಿಗೆ ಶುಭಾಶಯಗಳು' ಎಂದು ಹೇಳಿದ್ದಾರೆ.

ಮಹಿಳೆಯರ ಲಾಂಗ್‌ಜಂಪ್‌ನಲ್ಲಿ ಶೈಲಿ ಸಿಂಗ್ ಮತ್ತು ಪುರುಷರ 10 ಕಿ.ಮೀ ನಡಿಗೆಯಲ್ಲಿ ಅಮಿತ್ ಖತ್ರಿ ಬೆಳ್ಳಿ ಪದಕ ಗೆದ್ದಿದ್ದಾರೆ. 4X400 ಮೀಟರ್ಸ್‌ ಮಿಶ್ರ ರಿಲೆಯಲ್ಲೂ ಭಾರತಕ್ಕೆ ಕಂಚಿನ ಪದಕ ಒಲಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT