ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Vinesh Disqualified | ಸೂಕ್ತ ಕ್ರಮ ಕೈಗೊಳ್ಳಲು ಪ್ರಧಾನಿ ಸೂಚನೆ: ಕೇಂದ್ರ ಸಚಿವ

Published : 7 ಆಗಸ್ಟ್ 2024, 11:18 IST
Last Updated : 7 ಆಗಸ್ಟ್ 2024, 11:18 IST
ಫಾಲೋ ಮಾಡಿ
Comments

ನವದೆಹಲಿ: ಭಾರತದ ಕುಸ್ತಿಪಟು ವಿನೇಶಾ ಫೋಗಟ್ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿರುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತ ಒಲಿಂಪಿಕ್ ಸಂಸ್ಥೆಗೆ (ಐಒಎ) ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಿದ್ದಾರೆ ಎಂದು ಲೋಕಸಭೆಗೆ ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.

ಈ ಕುರಿತು ಲೋಕಸಭೆಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ ಮನ್‌ಸುಖ್‌ ಮಾಂಡವೀಯ, 'ಫೋಗಟ್ ಅನರ್ಹ ಸಂಬಂಧ ಯುನೈಟೆಡ್‌ ವರ್ಲ್ಡ್‌ ರೆಸ್ಲಿಂಗ್‌‌ಗೆ (ಯುಡಬ್ಲ್ಯುಡಬ್ಲ್ಯು) ಭಾರತ ಒಲಿಂಪಿಕ್ಸ್ ಸಂಸ್ಥೆ ತೀವ್ರ ಪ್ರತಿಭಟನೆ ದಾಖಲಿಸಿದೆ' ಎಂದು ತಿಳಿಸಿದ್ದಾರೆ.

'ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಐಒಎ ಅಧ್ಯಕ್ಷೆ ಪಿ.ಟಿ.ಉಷಾ ಅವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ' ಎಂದು ಅವರು ಹೇಳಿದ್ದಾರೆ.

ಫೋಗಟ್ ಅನರ್ಹಗೊಂಡಿರುವುದಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸದನವನ್ನು ಬಹಿಷ್ಕರಿಸಿದವು.

'100 ಗ್ರಾಂ ತೂಕ ಹೆಚ್ಚಿದ್ದರಿಂದ ಭಾರತದ ಕುಸ್ತಿಪಟು ವಿನೇಶಾ ಫೋಗಟ್ ಅವರು ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ. ವಿನೇಶಾ ಅವರು ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಸ್ಪರ್ಧೆಯ ನಿಯಮದ ಅನ್ವಯ ಅವರ ತೂಕ 50 ಕೆ.ಜಿ ಇರಬೇಕಿತ್ತು' ಎಂದು ಅವರು ತಿಳಿಸಿದ್ದಾರೆ.

'ಯುನೈಟೆಡ್‌ ವರ್ಲ್ಡ್‌ ರೆಸ್ಲಿಂಗ್‌ ನಿಯಮದ ಅನ್ವಯ ಸ್ಪರ್ಧೆಗೂ ಮುನ್ನ ಪ್ರತಿದಿನ ಬೆಳಿಗ್ಗೆ ತೂಕವನ್ನು ಅಳೆಯಲಾಗುತ್ತದೆ. ಆಗಸ್ಟ್ 7 ಬೆಳಿಗ್ಗೆ 7.15ರಿಂದ 7.15ರ (ಪ್ಯಾರಿಸ್ ಸಮಯ) ನಡುವೆ ನಡೆಸಿದ ಪರೀಕ್ಷೆಯಲ್ಲಿ ವಿನೇಶಾ ಅವರ ತೂಕ 50 ಕೆ.ಜಿ 100 ಗ್ರಾಂ ಇತ್ತು. ಇದರಿಂದಾಗಿ ಅನರ್ಹಗೊಂಡರು' ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT