ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಸ್‌: ಜಂಟಿ ಅಗ್ರಸ್ಥಾನಕ್ಕೆ ಪ್ರಜ್ಞಾನಂದ

Published 24 ಜನವರಿ 2024, 23:12 IST
Last Updated 24 ಜನವರಿ 2024, 23:12 IST
ಅಕ್ಷರ ಗಾತ್ರ

ವಿಯ್ಕ್‌ ಆನ್‌ ಝೀ (ನೆದರ್ಲೆಂಡ್ಸ್‌): ಭಾರತದ ಆರ್‌. ಪ್ರಜ್ಞಾನಂದ ಅವರು ಬುಧವಾರ ಟಾಟಾ ಸ್ಟೀಲ್‌ ಮಾಸ್ಟರ್ಸ್‌ ಚೆಸ್‌ ಟೂರ್ನಿಯ ಒಂಬತ್ತನೇ ಸುತ್ತಿನ ಪಂದ್ಯದಲ್ಲಿ ಹಾಲಿ ಮತ್ತು ನಾಲ್ಕು ಬಾರಿಯ ಮಹಿಳಾ ವಿಶ್ವ ಚಾಂಪಿಯನ್ ವೆಂಜುನ್ ಜು ಅವರನ್ನು ಸೋಲಿಸಿ, ಜಂಟಿ ಅಗ್ರಸ್ಥಾನಕ್ಕೆ ಏರಿದರು.

ಈ ಗೆಲುವಿನ ಮೂಲಕ ಪ್ರಜ್ಞಾನಂದ ಅವರು ಹಾಲಿ ವಿಶ್ವ ಚಾಂಪಿಯನ್‌ ವೆಂಜುನ್ ಅವರನ್ನು ಮುಕ್ತ ಮತ್ತು ಮಹಿಳಾ ವಿಭಾಗದಲ್ಲಿ ಸೋಲಿಸಿದ ಏಕೈಕ ಆಟಗಾರ ಎಂಬ ಹಿರಿಮೆಗೆ ಪಾತ್ರವಾದರು. ವಾರದ ಹಿಂದೆಯಷ್ಟೇ ಇದೇ ಟೂರ್ನಿಯಲ್ಲಿ ಪ್ರಜ್ಞಾನಂದ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದ್ದರು.

ಭಾರತದ ಡಿ. ಗುಕೇಶ್, ಉಜ್ಬೇಕಿಸ್ತಾನನ ನಾಡಿರ್ಬೆಕ್ ಅಬ್ದುಸತ್ತಾರೋವ್ ಮತ್ತು ಆತಿಥೇಯ ನೆದರ್ಲೆಂಡ್ಸ್‌ನ ಅನೀಶ್ ಗಿರಿ ಅವರೊಂದಿಗೆ 5.5 ಪಾಯಿಂಟ್‌ಗಳೊಂದಿಗೆ ಪ್ರಗ್ನಾನಂದ ಅಗ್ರಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT