ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌: ಪ್ರಣಯ್‌ ಶುಭಾರಂಭ

ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಷಿಪ್‌
Last Updated 14 ಮಾರ್ಚ್ 2023, 14:27 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಂ: ಸೊಗಸಾದ ಆಟವಾಡಿದ ಭಾರತದ ಎಚ್‌.ಎಸ್‌.ಪ್ರಣಯ್‌ ಅವರು ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿದರು.

ಗುರುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಅವರು 21–19, 22–20 ರಲ್ಲಿ ಚೀನಾ ತೈಪೆಯ ತ್ಸು ವೀ ವಾಂಗ್‌ ವಿರುದ್ಧ ನೇರ ಗೇಮ್‌ಗಳಿಂದ ಗೆದ್ದರು.

ವಿಶ್ವ ರ್‍ಯಾಂಕಿಂಗ್‌ನಲ್ಲಿ ಒಂಬತ್ತನೇ ಸ್ಥಾನದಲ್ಲಿರುವ ಪ್ರಣಯ್‌, 49 ನಿಮಿಷಗಳಲ್ಲಿ ಗೆಲುವು ಸಾಧಿಸಿದರು. ಈ ಮೂಲಕ ವಾಂಗ್‌ ವಿರುದ್ಧದ ಗೆಲುವಿನ ದಾಖಲೆಯನ್ನು 5–3ಕ್ಕೆ ಹೆಚ್ಚಿಸಿಕೊಂಡರು.

ಭಾರತದ ಆಟಗಾರ ಮುಂದಿನ ಸುತ್ತಿನಲ್ಲಿ ಇಂಡೊನೇಷ್ಯಾದ ಆ್ಯಂಟನಿ ಸಿನಿಸುಕ ಗಿಂಟಿಂಗ್‌ ಅವರ ಸವಾಲು ಎದುರಿಸಲಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT