ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾ ಓಪನ್‌ ಇಂದಿನಿಂದ: ಎಚ್‌.ಎಸ್‌. ಪ್ರಣಯ್‌ ಮೇಲೆ ಹೆಚ್ಚಿದ ನಿರೀಕ್ಷೆ

Published 12 ಜೂನ್ 2023, 23:30 IST
Last Updated 12 ಜೂನ್ 2023, 23:30 IST
ಅಕ್ಷರ ಗಾತ್ರ

ಜಕಾರ್ತ: ಎಚ್‌.ಎಸ್‌. ಪ್ರಣಯ್‌ ಮಂಗಳವಾರ ಇಲ್ಲಿ ಆರಂಭವಾಗಲಿರುವ ಇಂಡೊನೇಷ್ಯಾ ಓಪನ್‌ ಬಿಡಬ್ಲ್ಯೂಎಫ್‌ ಸೂಪರ್‌– 1000 ಟೂರ್ನಿಯಲ್ಲಿ ಭಾರತದ ಸವಾಲನ್ನು ಮುನ್ನಡೆಸಲಿದ್ದಾರೆ.

ಕಳೆದ ತಿಂಗಳು ನಡೆದಿದ್ದ ಮಲೇಷ್ಯಾ ಮಾಸ್ಟರ್ಸ್ ಸೂಪರ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಚಾಂಪಿಯನ್‌ ಆಗಿದ್ದ ಪ್ರಣಯ್‌ ಮೇಲೆ ನಿರೀಕ್ಷೆ ಹೆಚ್ಚಿದೆ. ವಿಶ್ವ ರ‍್ಯಾಂಕಿಂಗ್‌ನಲ್ಲಿ 8ನೇ ಸ್ಥಾನದಲ್ಲಿರುವ ಅವರು ಮೊದಲ ಸುತ್ತಿನಲ್ಲಿ ಜಪಾನ್‌ನ ಕೆಂಟಾ ನಿಶಿಮೊಟೊ ಅವರನ್ನು ಎದುರಿಸುವರು.

ಕೊನೆಯ ಎರಡು ಟೂರ್ನಿಯಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದ ಪಿ.ವಿ. ಸಿಂಧು ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನದ ವಿಶ್ವಾಸದಲ್ಲಿದ್ದಾರೆ. ಅವರು ಮೊದಲ ಸುತ್ತಿನಲ್ಲಿ ಇಂಡೋನೇಷ್ಯಾದ ಗ್ರೆಗೋರಿಯಾ ಮರಿಸ್ಕಾ ತುಂಜಂಗ್ ಅವರ ಸವಾಲನ್ನು ಎದುರಿಸುವರು.

ಮಲೇಷ್ಯಾ ಮತ್ತು ಸ್ಪೇನ್‌ ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದ ಕಿದಂಬಿ ಶ್ರೀಕಾಂತ್‌ ಇಲ್ಲಿ ಮೊದಲ ಸುತ್ತಿನಲ್ಲಿ ಲು ಗುವಾಂಗ್ ಜು ಅವರ ವಿರುದ್ಧ ಸೆಣಸಾಡುವರು. ಥಾಯ್ಲೆಂಡ್‌ ಓಪನ್‌ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ಲಕ್ಷ್ಮಸೇನ್‌ ವಿಶ್ವದ 8ನೇ ಶ್ರೇಯಾಂಕದ ಮಲೇಷ್ಯಾದ ಲೀ ಝೀ ಜಿಯಾ ವಿರುದ್ಧ ಪೈಪೋಟಿ ನಡೆಸುವರು.

ಮಹಿಳೆಯರ ಸಿಂಗಲ್ಸ್‌ನಲ್ಲಿ ನೈನಾ ನೆಹ್ವಾಲ್‌, ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ– ಚಿರಾಗ್‌ ಶೆಟ್ಟಿ, ಎಂ.ಆರ್‌. ಅರ್ಜುನ್‌– ಧ್ರುವ ಕಪಿಲಾ ಜೋಡಿ ಕಣಕ್ಕೆ ಇಳಿಯಲಿದೆ. ಮಹಿಳೆಯರ ಡಬಲ್ಸ್‌ನಲ್ಲಿ ರೀಸಾ ಜೋಲಿ ಮತ್ತು ಗಾಯತ್ರಿ ಗೋಪಿಚಂದ್‌ ಸುಧಾರಿತ ಆಟ ಪ್ರದರ್ಶಿಸುವ ವಿಶ್ವಾಸದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT