ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆ ಚಾಂಪಿಯನ್‌

Published 25 ನವೆಂಬರ್ 2023, 22:44 IST
Last Updated 25 ನವೆಂಬರ್ 2023, 22:44 IST
ಅಕ್ಷರ ಗಾತ್ರ

ಬೆಂಗಳೂರು: ‘ಕಂಠೀರವ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಬಾಲಕರ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು 67 ಅಂಕಗಳನ್ನು ಪಡೆಯುವುದರ ಮೂಲಕ ಚಾಂಪಿಯನ್‌ ಪಟ್ಟ ಪಡೆದುಕೊಂಡಿದೆ’ ಎಂದು ಬೆಂಗಳೂರು ಉತ್ತರ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್. ರಾಜು ತಿಳಿಸಿದ್ದಾರೆ.

‘ಕ್ರೀಡಾಕೂಟದ ಆತಿಥ್ಯ ವಹಿಸಿದ್ದ ಬೆಂಗಳೂರು ಉತ್ತರ ಜಿಲ್ಲೆ 17 ಅಂಕಗಳನ್ನು ಪಡೆದುಕೊಂಡು ರನ್ನರ್‌ ಅಪ್‌ ಆಗಿದೆ. ಬೆಳಗಾವಿ ಜಿಲ್ಲೆಯ ಭೂಷಣ್ ಸುನಿಲ್ ಪಟೇಲ್‌ ವಿವಿಧ ಓಟಗಳ ವಿಭಾಗದಲ್ಲಿ ಒಂದು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ಜಯಸುವ ಮೂಲಕ ವೈಯಕ್ತಿಕ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT