ಚಾಗ್‌ಝೌ: ಭಾರತದ ಉದಯೋನ್ಮುಖ ಆಟಗಾರ ಪ್ರಿಯಾಂಶು ರಾಜಾವತ್ ಅವರು ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲೇ ಹೊರಬಿದ್ದರು.

ಮಂಗಳವಾರ ನಡೆದ 32ರ ಘಟ್ಟದ ಪಂದ್ಯದಲ್ಲಿ 22 ವರ್ಷದ ರಾಜಾವತ್ 13-21, 16-21ರ ನೇರ ಗೇಮ್‌ಗಳಿಂದ ಕೆನಡಾದ ಬ್ರಿಯಾನ್ ಯಾಂಗ್ ಅವರಿಗೆ ಶರಣಾದರು.

ವಿಶ್ವದ 40ನೇ ಕ್ರಮಾಂಕದ ಕಿರಣ್ ಜಾರ್ಜ್ ಅವರು ಪುರುಷರ ಸಿಂಗಲ್ಸ್‌ನ ಕಣದಲ್ಲಿ ಉಳಿದಿರುವ ಭಾರತದ ಏಕೈಕ ಭರವಸೆಯಾಗಿದ್ದಾರೆ. ಅವರು ಆರಂಭಿಕ ಸುತ್ತಿನಲ್ಲಿ ಜಪಾನ್‌ನ ಕೆಂಟಾ ನಿಶಿಮೊಟೊ ಅವರನ್ನು ಎದುರಿಸಲಿದ್ದಾರೆ.

ಪಿ.ವಿ. ಸಿಂಧು, ಲಕ್ಷ್ಯ ಸೇನ್ ಮತ್ತು ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೇರಿದಂತೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ತಾರೆಯರು ವರ್ಷದ ಕೊನೆಯ ಬಿಡಬ್ಲ್ಯೂಎಫ್ ಸೂಪರ್ 1000 ಟೂರ್ನಿಯಿಂದ ದೂರ ಉಳಿದಿದ್ದಾರೆ.

ಆಕರ್ಷಿ ಕಶ್ಯಪ್, ಮಾಳವಿಕಾ ಬನ್ಸೋಡ್, ಸಮಿಯಾ ಇಮಾದ್ ಫಾರೂಕಿ ಅವರು ಮಹಿಳಾ ಸಿಂಗಲ್ಸ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಮಹಿಳೆಯರ ಡಬಲ್ಸ್‌ನಲ್ಲಿ ಗಾಯತ್ರಿ ಗೋಪಿಚಂದ್– ಟ್ರಿಸಾ ಜೋಳಿ ಹಾಗೂ ಪಾಂಡಾ ಸಹೋದರಿಯರಾದ ರುತುಪರ್ಣ ಮತ್ತು ಶ್ವೇತಪರ್ಣ ಕಣದಲ್ಲಿದ್ದಾರೆ. ಎನ್.ಸಿಕ್ಕಿ ರೆಡ್ಡಿ ಮತ್ತು ಬಿ. ಸುಮೀತ್ ರೆಡ್ಡಿ ಅವರು ಮಿಶ್ರ ಡಬಲ್ಸ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.