ಮುಂಬೈ: ಒಂಬತ್ತನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) ಅಕ್ಟೋಬರ್ 7ರಿಂದ ನಡೆಯಲಿದೆ. ಲೀಗ್ನ ಆಯೋಜಕ ಮಶಾಲ್ ಸ್ಪೋರ್ಟ್ಸ್ ಶುಕ್ರವಾರ ಈ ವಿಷಯ ತಿಳಿಸಿದೆ.
ಟೂರ್ನಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಆಗಸ್ಟ್ ಐದು ಮತ್ತು ಆರರಂದು ನಡೆದಿತ್ತು.
ಬೆಂಗಳೂರು, ಪುಣೆ, ಹೈದರಾಬಾದ್ನಲ್ಲಿ ಲೀಗ್ ಹಂತದ ಪಂದ್ಯಗಳು ಡಿಸೆಂಬರ್ ತಿಂಗಳ ಮಧ್ಯದವರೆಗೆ ನಡೆಯಲಿವೆ. ಕೋವಿಡ್ನಿಂದಾಗಿ ಕಳೆದ ಆವೃತ್ತಿಯ ಪಂದ್ಯಗಳಿಗೆ ಪ್ರೇಕ್ಷಕರಿಗೆ ಅವಕಾಶ ನೀಡಿರಲಿಲ್ಲ.
‘ಒಂಬತ್ತನೇ ಪ್ರೊ ಕಬಡ್ಡಿ ಲೀಗ್ ಆಯೋಜನೆಗೆ ಉತ್ಸುಕರಾಗಿದ್ದೇವೆ. ಬೆಂಗಳೂರು, ಪುಣೆ ಮತ್ತು ಹೈದರಾಬಾದ್ಗಳಲ್ಲಿ ಪ್ರೇಕ್ಷಕರು ತಮ್ಮ ನೆಚ್ಚಿನ ತಂಡ ಮತ್ತು ಕ್ರೀಡಾಪಟುಗಳನ್ನು ಕಣ್ತುಂಬಿಕೊಳ್ಳಬಹುದು‘ ಎಂದು ಮಶಾಲ್ ಸ್ಪೋರ್ಟ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಪಮ್ ಗೋಸ್ವಾಮಿ ತಿಳಿಸಿದ್ದಾರೆ.