ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ: ಸ್ಟೀಲರ್ಸ್‌ಗೆ ಜಯದ ತವಕ

Last Updated 15 ಅಕ್ಟೋಬರ್ 2018, 16:18 IST
ಅಕ್ಷರ ಗಾತ್ರ

ಬೆಂಗಳೂರು: ತವರಿನ ಅಂಗಳದಲ್ಲಿ ಸತತ ಎರಡು ಪಂದ್ಯಗಳಲ್ಲಿ ಸೋತಿರುವ ಹರಿಯಾಣ ಸ್ಟೀಲರ್ಸ್‌ ತಂಡ ಗೆಲುವಿನ ಹಾದಿಗೆ ಮರಳಲು ಕಾತರವಾಗಿದೆ.

ಸೋನೆಪತ್‌ನ ಮೋತಿಲಾಲ್‌ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ 9 ಗಂಟೆಗೆ ನಡೆಯುವ ‘ಎ’ ವಲಯದ ಪಂದ್ಯದಲ್ಲಿ ಸ್ಟೀಲರ್ಸ್‌ ತಂಡ ಬಲಿಷ್ಠ ಜೈಪುರ ಪಿಂಕ್ ಪ್ಯಾಂಥರ್ಸ್‌ ವಿರುದ್ಧ ಸೆಣಸಲಿದೆ.

ತವರಿನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ಎದುರು ಗೆದ್ದಿದ್ದ ಸ್ಟೀಲರ್ಸ್‌ ನಂತರ ಯು ಮುಂಬಾ ಮತ್ತು ಪುಣೇರಿ ಪಲ್ಟನ್‌ಗೆ ಶರಣಾಗಿತ್ತು.

ದಿನದ ಇನ್ನೊಂದು ಪಂದ್ಯದಲ್ಲಿ (ರಾತ್ರಿ 8) ಬೆಂಗಾಲ್‌ ವಾರಿಯರ್ಸ್‌ ತಂಡ ತೆಲುಗು ಟೈಟನ್ಸ್‌ ವಿರುದ್ಧ ಆಡಲಿದೆ. ಬಲಿಷ್ಠ ತಂಡಗಳ ನಡುವಣ ಈ ಹೋರಾಟದಲ್ಲಿ ಗೆಲುವು ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಗರಿಗೆದರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT