ನೊಯ್ಡಾ: ರೇಡರ್ ವಿನಯ್ ಅವರ ಅದ್ಭುತ ಆಟದ ಜತೆಗೆ ಸಾಂಘಿಕ ಪ್ರದರ್ಶನ ಮುಂದುವರಿಸಿದ ಹರಿಯಾಣ ಸ್ಟೀಲರ್ಸ್ ತಂಡ, ಪ್ರೊ ಕಬಡ್ಡಿ ಲೀಗ್ 11ನೇ ಆವೃತ್ತಿಯ ಪಂದ್ಯದಲ್ಲಿ ತಮಿಳ್ ತಲೈವಾಸ್ ತಂಡವನ್ನು 42–30 ಅಂಕಗಳಿಂದ ಸುಲಭವಾಗಿ ಮಣಿಸಿತು.

ಗೆಲುವಿನೊಡನೆ ಸ್ಟೀಲರ್ಸ್ ತಂಡ ಒಟ್ಟು 61 ಅಂಕಗಳೊಂದಿಗೆ ಲೀಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿತು. ವಿರಾಮದ ವೇಳೆ ವಿಜೇತ ತಂಡ 13–10 ರಲ್ಲಿ ಮೂರು ಪಾಯಿಂಟ್ಗಳ ಮುನ್ನಡೆ ಸಾಧಿಸಿತ್ತು.

ರೋಚಕವಾಗಿದ್ದ ಎರಡನೇ ಪಂದ್ಯದಲ್ಲಿ ಪುಣೇರಿ ಪಲ್ಟನ್ ತಂಡ 34–33 ಪಾಯಿಂಟ್ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.