ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ: ಸೆಮಿಫೈನಲ್‌ಗೆ ಸಿಂಧು

Published 20 ಅಕ್ಟೋಬರ್ 2023, 16:21 IST
Last Updated 20 ಅಕ್ಟೋಬರ್ 2023, 16:21 IST
ಅಕ್ಷರ ಗಾತ್ರ

ಒಡೆನ್ಸ್, ಡೆನ್ಮಾರ್ಕ್‌: ಶಿಸ್ತಿನ ಆಟವಾಡಿದ ಭಾರತದ ‍ಪಿ.ವಿ. ಸಿಂಧು ಅವರು ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದರು.

ಶುಕ್ರವಾರ ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಅವರು 21–19, 21–12 ರಿಂದ ಥಾಯ್ಲೆಂಡ್‌ನ ಸುಪನಿದ ಕಟೆಥಾಂಗ್‌ ಅವರನ್ನು ಮಣಿಸಿದರು. ಸಿಂಧು ಅವರು ಕಳೆದ ವಾರ ನಡೆದಿದ್ದ ಆರ್ಕಟಿಕ್ ಓಪನ್‌ ಟೂರ್ನಿಯಲ್ಲೂ ಸೆಮಿಫೈನಲ್‌ ಪ್ರವೇಶಿಸಿದ್ದರು.

ಭಾರತದ ಆಟಗಾರ್ತಿ ಶನಿವಾರ ನಡೆಯಲಿರುವ ನಾಲ್ಕರಘಟ್ಟದ ಪಂದ್ಯದಲ್ಲಿ ಸ್ಪೇನ್‌ನ ಕರೊಲಿನಾ ಮರಿನ್‌ ಅವರನ್ನು ಎದುರಿಸಲಿದ್ದಾರೆ.

ಸುಪನಿದ ವಿರುದ್ಧದ ಪಂದ್ಯದ ಮೊದಲ ಗೇಮ್‌ನಲ್ಲಿ ಪ್ರಬಲ ಪೈಪೋಟಿ ಕಂಡುಬಂತು. ಆದರೆ ಎರಡನೇ ಗೇಮ್‌ನಲ್ಲಿ ಸಿಂಧು ಪೂರ್ಣ ಪ್ರಭುತ್ವ ಸಾಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT