ಬರ್ಮಿಂಗ್‌ಹ್ಯಾಂ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಅವರು ಗುರುವಾರ ಆರಂಭವಾಗಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

‘ಸಿಂಧು ಅವರು ರಾಷ್ಟ್ರಧ್ವಜ ಹಿಡಿದುಕೊಂಡು ಉದ್ಘಾಟನಾ ಸಮಾರಂಭದಲ್ಲಿ ಭಾರತದ ಕ್ರೀಡಾಪಟುಗಳ ತಂಡವನ್ನು ಮುನ್ನಡೆಸಲಿದ್ದಾರೆ’ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಮನ್‌ವೆಲ್ತ್ ಕ್ರೀಡಾಕೂಟ: ಲವ್ಲಿನಾ ಕೋಚ್ಗೆ ಮಾನ್ಯತಾ ಪತ್ರ

ಉದ್ಘಾಟನಾ ಸಮಾರಂಭದಲ್ಲಿ 164 ಅಥ್ಲೀಟ್‌ಗಳು ಭಾಗವಹಿಸಲಿದ್ದಾರೆ. ಒಟ್ಟು 215 ಕ್ರೀಡಾಪಟುಗಳು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಂಧು ಅವರು ಭಾರತದ ಪರ ಚಿನ್ನದ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುವಾಗಿದ್ದಾರೆ. ಕಳೆದ ಎರಡು ಆವೃತ್ತಿಯಲ್ಲಿ ಬೆಳ್ಳಿ (ಗೋಲ್ಡ್ ಕೋಸ್ಟ್‌ನಲ್ಲಿ) ಹಾಗೂ ಕಂಚಿನ ಪದಕ (ಗ್ಲಾಸ್ಗೊ) ಜಯಿಸಿದ್ದಾರೆ.

ಗಾಯದ ಸಮಸ್ಯೆ: ಕಾಮನ್‌ವೆಲ್ತ್ ಗೇಮ್ಸ್ನಿಂದ ಹೊರಗುಳಿದ ನೀರಜ್ ಚೋಪ್ರಾ

2018ರಲ್ಲಿ ಗೋಲ್ಡ್ ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿಯೂ ಸಿಂಧು ಅವರು ಭಾರತ ಕ್ರೀಡಾಪಟುಗಳ ತಂಡವನ್ನು ಮುನ್ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.