ಸಿಂಗಪುರ: ಭಾರತದ ಅಗ್ರಮಾನ್ಯ ಆಟಗಾರ್ತಿ ಪಿ.ವಿ. ಸಿಂಧು, ಸಿಂಗಪುರ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಫೈನಲ್ಗೆ ಪ್ರವೇಶಿಸಿದ್ದಾರೆ.

ಶನಿವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಸಿಂಧು ಅವರು ಜಪಾನ್ನ ಸಿನಾ ಕವಾಕಮಿ ವಿರುದ್ಧ 21-15, 21-7ರ ಅಂತರದಲ್ಲಿ ಗೆಲುವು ಸಾಧಿಸಿದರು.

ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಷ್ಯಾದ ಮಾಜಿ ಟೆನಿಸ್ ಆಟಗಾರ್ತಿ ಶರಪೋವಾ

ಶುಕ್ರವಾರ ನಡೆದ ಕ್ವಾರ್ಟರ್ಫೈನಲ್ನಲ್ಲಿ ಸಿಂಧು, 17–21, 21–11, 21–19 ರಿಂದ ಚೀನಾದ ಹ್ಯಾನ್ ಯೀ ವಿರುದ್ಧ ರೋಚಕ ಜಯ ಗಳಿಸಿ ಅಂತಿಮ ನಾಲ್ಕರ ಘಟ್ಟ ಪ್ರವೇಶಿಸಿದ್ದರು.

ಪಂದ್ಯದ ಆರಂಭದಿಂದಲೇ ಎದುರಾಳಿ ವಿರುದ್ಧ ಹಿಡಿತ ಸಾಧಿಸಿದ ಸಿಂಧೂ, ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ.

ಇದೇ ತಿಂಗಳು ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟಕ್ಕೂ ಮುನ್ನ ಬ್ಯಾಡ್ಮಿಂಟನ್ ಆಟಗಾರರಿಗೆ ಸಿಂಗಪುರ ಟೂರ್ನಿಯು ಪೂರ್ವಾಭ್ಯಾಸದ ವೇದಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.