ನವದೆಹಲಿ: ದೇಶದಾದ್ಯಂತ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿರುವುದರಿಂದ 67 ತರಬೇತಿ ಕೇಂದ್ರಗಳನ್ನು ಮುಚ್ಚಲು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ನಿರ್ಧರಿಸಿದೆ. ಆದರೆ ಎಲೀಟ್ ಅಥ್ಲೀಟ್‌ಗಳ ರಾಷ್ಟ್ರೀಯ ಶಿಬಿರಗಳು ಬಯೋಬಬಲ್ ವ್ಯವಸ್ಥೆಯಲ್ಲಿ ಮುಂದುವರಿಯಲಿವೆ.

ಪಟಿಯಾಲ ಮತ್ತು ಬೆಂಗಳೂರಿನಲ್ಲಿರುವಂತಹ ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರಗಳ ಮೇಲೆ (ಎನ್‌ಸಿಒಇ)ಈ ನಿರ್ಧಾರವು ಪರಿಣಾಮ ಬೀರುವುದಿಲ್ಲ, ಅಲ್ಲಿರುವ ಎಲೀಟ್ ಕ್ರೀಡಾಪಟುಗಳಿಗೆ ವಿವಿಧ ವಿಭಾಗಗಳಲ್ಲಿ ಶಿಬಿರಗಳು ಪ್ರಗತಿಯಲ್ಲಿವೆ.

‘ಕೋವಿಡ್‌ಪ್ರಕರಣಗಳು ಹೆಚ್ಚುತ್ತಿರುವ ದೃಷ್ಟಿಯಿಂದ, ದೇಶದಾದ್ಯಂತ 67 ತರಬೇತಿ ಕೇಂದ್ರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ.ಕ್ರೀಡಾಪಟುಗಳ ಸುರಕ್ಷತೆಗಾಗಿ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ವಿವಿಧ ರಾಜ್ಯಗಳು ನೀಡಿದ ನಿರ್ದೇಶನಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ‘ ಎಂದು ಸಾಯ್ ತಿಳಿಸಿದೆ.

ಹಲವು ತರಬೇತಿ ಕೇಂದ್ರಗಳಲ್ಲಿರುವ ಅಥ್ಲೀಟ್‌ಗಳಲ್ಲಿ ಕೋವಿಡ್ ಪ್ರಕರಣಗಳು ದೃಢಪಟ್ಟ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ತರಬೇತಿ ಕೇಂದ್ರಗಳನ್ನು ಪುನರಾರಂಭಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.