ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸೈನಾ

Last Updated 26 ಜೂನ್ 2018, 18:36 IST
ಅಕ್ಷರ ಗಾತ್ರ

ಕ್ವಾಲಾಲಂಪುರ: ಭಾರತದ ಸೈನಾ ನೆಹ್ವಾಲ್‌ ಅವರು ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಜಯ ಸಾಧಿಸಿದ್ದಾರೆ.

ಮಂಗಳವಾರ ನಡೆದ ಸಿಂಗಲ್ಸ್‌ ವಿಭಾಗದ ಪಂದ್ಯದಲ್ಲಿ ಸೈನಾ ಅವರು ಹಾಂಕಾಂಗ್‌ನ ಯಿಪ್‌ ಪು ಯಿನ್‌ ಅವರ ವಿರುದ್ಧ 21–12, 21–16ರಿಂದ ಮಣಿಸಿ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

ಪಂದ್ಯದ ಆರಂಭದಿಂದಲೂ ಆಕ್ರಮಣಕಾರಿ ಆಟವಾಡಿದ ಸೈನಾ ಅವರು ಮನಮೋಹಕ ಸ್ಮ್ಯಾಷ್‌ ಹಾಗೂ ರಿಟರ್ನ್ಸ್‌ಗಳಿಂದ ಎದುರಾಳಿಯನ್ನು ತಬ್ಬಿಬ್ಬುಗೊಳಿಸಿದರು.

ಮುಂದಿನ ಪಂದ್ಯದಲ್ಲಿ ಅವರು ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಎದುರಿಸಲಿದ್ದಾರೆ.

ಇತ್ತೀಚೆಗೆ ನಡೆದಿದ್ದ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಸೈನಾ ಅವರು ಸಿಂಗಲ್ಸ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT