ಶೆಂಜೆನ್ (ಚೀನಾ): ಭಾರತದ ಅಗ್ರಮಾನ್ಯ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಚೀನಾ ಮಾಸ್ಟರ್ಸ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದರು. ಆದರೆ, ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್ನಲ್ಲಿ ಶುಕ್ರವಾರ ಅಭಿಯಾನ ಮುಗಿಸಿದರು.

ಕಳೆದ ವಾರ ಹಾಂಗ್ಕಾಂಗ್ ಓಪನ್ನಲ್ಲಿ ರನ್ನರ್ಸ್ ಅಪ್ ಆಗಿದ್ದ ಚಿರಾಗ್ ಮತ್ತು ಸಾತ್ವಿಕ್ ಜೋಡಿಯು ಎಂಟರ ಘಟ್ಟದ ಹಣಾಹಣಿಯಲ್ಲಿ 21-14, 21-14ರಿಂದ ಚೀನಾ ತೈಪೆಯ ರೆನ್ ಕ್ಸಿಯಾಂಗ್ ಯು ಮತ್ತು ಕ್ಸಿ ಹಾನಾನ್ ಅವರನ್ನು ಮಣಿಸಿದರು.

ವಿಶ್ವದ ಒಂಬತ್ತನೇ ಕ್ರಮಾಂಕದಲ್ಲಿರುವ ಸಾತ್ವಿಕ್ ಮತ್ತು ಚಿರಾಗ್ ಅವರು ಶನಿವಾರ ನಡೆಯಲಿರುವ ಸೆಮಿಫೈನಲ್ನಲ್ಲಿ ತಮ್ಮ ಸಾಂಪ್ರದಾಯಿಕ ಎದುರಾಳಿಗಳಾದ ಎರಡನೇ ಶ್ರೇಯಾಂಕಿತ ಮಲೇಷ್ಯಾದ ಆರನ್ ಚಿಯಾ ಮತ್ತು ಸೋಹ್ ವೂಯಿ ಯಿಕ್ ಅವರನ್ನು ಎದುರಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.