ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್ ಅಥ್ಲೆಟಿಕ್ಸ್: ಕರಣವೀರ್ ಸಿಂಗ್ ಉದ್ದೀಪನ ಮದ್ದು ಸೇವನೆ ದೃಢ

Published 8 ಜುಲೈ 2023, 23:30 IST
Last Updated 8 ಜುಲೈ 2023, 23:30 IST
ಅಕ್ಷರ ಗಾತ್ರ

ನವದೆಹಲಿ: ಶಾಟ್‌ಪಟ್ ಅಥ್ಲೀಟ್ ಕರಣವೀರ್ ಸಿಂಗ್ ಅವರು ಉದ್ದೀಪನ ಮದ್ದು ಸೇವನೆ ಮಾಡಿರುವುದು ದೃಢಪಟ್ಟಿದೆ. ಇದರಿಂದಾಗಿ ಅವರು ಏಷ್ಯನ್ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸುವ ಅವಕಾಶ ಕಳೆದುಕೊಂಡಿದ್ದಾರೆ.

ಬ್ಯಾಂಕಾಕ್‌ನಲ್ಲಿ ಮುಂದಿನ ವಾರ ಏಷ್ಯನ್ ಅಥ್ಲೆಟಿಕ್ಸ್ ನಡೆಯಲಿದೆ.

ಪಟಿಯಾಲದಲ್ಲಿರುವ ರಾಷ್ಟ್ರೀಯ ಕ್ರೀಡಾ ಸಂಸ್ಥೆ (ಎನ್‌ಐಎಸ್‌)ಯಲ್ಲಿ ಕರಣವೀರ್ ತರಬೇತಿ ಪಡೆಯುತ್ತಿದ್ದಾರೆ. ಇತ್ತೀಚೆಗೆ ಏಷ್ಯನ್ ಚಾಂಪಿಯನ್‌ಷಿಪ್  ಗಾಗಿ ಪ್ರಕಟಿಸಿದ 54 ಆಟಗಾರರ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. 

ಸ್ಪರ್ಧೆಯಿಂದ ಹೊರಗಿದ್ದಾಗ ನಡೆಸುವ ಪರೀಕ್ಷೆಯಲ್ಲಿ ಅವರು ಉದ್ದೀಪನ ಮದ್ದು ಸೇವನೆ ಮಾಡಿರುವುದು ಖಚಿತವಾಗಿದೆ. ಈ ವಿಷಯವನ್ನು ಭಾರತ ಅಥ್ಲೆಟಿಕ್ಸ್ ಫೆಡರೇಷನ್ (ಎಎಫ್‌ಐ) ಅಧ್ಯಕ್ಷ ಅದಿಲೆ ಸುಮರಿವಾಲಾ ಖಚಿತಪಡಿಸಿದ್ದಾರೆ.

ಕಳೆದ ಮೇ ತಿಂಗಳಲ್ಲಿ ನಡೆದಿದ್ದ ಫೆಡರೇಷನ್ ಕಪ್ ಅಥ್ಲೆಟಿಕ್ಸ್‌ನಲ್ಲಿ 25 ವರ್ಷದ ಕರಣವೀರ್ ಸಿಂಗ್ ಅವರು ಕಂಚಿನ ಪದಕ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT