ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Paris Paralympics | 200 ಮೀಟರ್ ಓಟ: ಭಾರತದ ಸಿಮ್ರಾನ್ ಶರ್ಮಾಗೆ ಕಂಚು

Published : 8 ಸೆಪ್ಟೆಂಬರ್ 2024, 4:21 IST
Last Updated : 8 ಸೆಪ್ಟೆಂಬರ್ 2024, 4:21 IST
ಫಾಲೋ ಮಾಡಿ
Comments

ಪ್ಯಾರಿಸ್‌: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಸಿಮ್ರಾನ್ ಶರ್ಮಾ ಅವರು 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

2024ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ವಿಜೇತೆ ಸಿಮ್ರಾನ್ ಅವರು ಪ್ಯಾರಾಲಿಂಪಿಕ್ಸ್‌ನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಆಘಾತ ಎದುರಿಸಿದ್ದರು. ಬಳಿಕ ಧೃತಿಗೆಡದ ಅವರು 200 ಮೀಟರ್ ಓಟದಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಕ್ಯೂಬಾದ ದಂತಕಥೆ ಒಮಾರಾ ಡುರಾಂಡ್ ಅವರು 23.62 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ದಾಖಲೆಯ 11ನೇ ಪ್ಯಾರಾಲಿಂಪಿಕ್ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. 100 ಮೀಟರ್ ಮತ್ತು 400 ಮೀಟರ್ ವಿಭಾಗಗಳಲ್ಲಿ ಒಮಾರಾ ಚಿನ್ನದ ಪದಕಗಳನ್ನು ಗೆದ್ದು ಇತಿಹಾಸದಲ್ಲಿ ಸಾರ್ವಕಾಲಿಕ ಅತ್ಯುತ್ತಮ ಪ್ಯಾರಾ ಅಥ್ಲೀಟ್‌ಗಳಲ್ಲಿ ಒಬ್ಬರಾಗಿದ್ದಾರೆ.

ವೆನೆಜುವೆಲಾದ ಅಲೆಜಾಂಡ್ರಾ ಪಾವೊಲಾ ಅವರು 24.19 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದಾರೆ. ಇತ್ತ ಭಾರತದ ಸಿಮ್ರಾನ್ ಶರ್ಮಾ ಅವರು 24.75 ಸೆಕೆಂಡ್‌ಗಳಲ್ಲಿ ಗುರಿ ತಲುಪುವ ಮೂಲಕ ಜಯಿಸಿದ್ದಾರೆ.

ಇದರೊಂದಿಗೆ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಸರ್ವಶ್ರೇಷ್ಠ ಪ್ರದರ್ಶನ ನೀಡಿರುವ ಭಾರತೀಯ ಸ್ಪರ್ಧಿಗಳು ಈವರೆಗೆ ಒಟ್ಟು 29 ಪದಕಗಳನ್ನು ಗೆದ್ದಿದ್ದಾರೆ. ಇದರಲ್ಲಿ ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು 13 ಕಂಚಿನ ಪದಕಗಳು ಒಳಗೊಂಡಿದ್ದು, ಭಾರತವು 16ನೇ ಸ್ಥಾನ ಕಾಯ್ದುಕೊಂಡಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಐದು ಚಿನ್ನ ಸೇರಿದಂತೆ ಭಾರತ ಒಟ್ಟು 19 ಪದಕಗಳನ್ನು ಗೆದ್ದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT