ಬಲರಾಮಪುರ (ಉತ್ತರಪ್ರದೇಶ): ‘ನನ್ನ ವಿರುದ್ಧ ನಡೆಸಲಾಗುತ್ತಿರುವ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ಘೋಷಣೆಗಳನ್ನು ಕೂಗಲಾಗುತ್ತಿದೆ’ ಎಂದು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಶುಕ್ರವಾರ ಹೇಳಿದ್ದಾರೆ.

‘ಈ ಆಂದೋಲನವು ದೆಹಲಿಯಿಂದ ಪಂಜಾಬ್ ಹಾಗೂ ಖಾಲಿಸ್ತಾನದತ್ತ ಸಾಗುತ್ತಿದೆ. ಬಜರಂಗ್ ಪೂನಿಯಾ ಅವರು ಮತ್ತೊಬ್ಬರ ಪರವಾಗಿ ಮಾತನಾಡುತ್ತಿದ್ದಾರೆ’ ಎಂದು ಹೇಳಿದ ಅವರು, ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲಿಲ್ಲ.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ಬ್ರಿಜ್‌ಭೂಷಣ್ ಸಿಂಗ್ ಎದುರಿಸುತ್ತಿದ್ದು, ಅವರ ವಿರುದ್ಧ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ವಿನೇಶಾ ಫೋಗಟ್, ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಸೇರಿದಂತೆ ಖ್ಯಾತ ಕುಸ್ತಿಪಟುಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಬ್ರಿಜ್‌ಭೂಷಣ್ ಸಿಂಗ್ ಅವರ ಬಂಧನಕ್ಕೆ ಒತ್ತಾಯಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ಜೂನ್ 5ರಂದು ಸಾಧುಗಳ ರ‍್ಯಾಲಿ ಆಯೋಜಿಸಲಾಗಿದ್ದು, ಅದರ ಸಿದ್ಧತೆಗಾಗಿ ಬ್ರಿಜ್‌ಭೂಷಣ್ ಸಿಂಗ್ ಬಲರಾಮಪುರಕ್ಕೆ ಬಂದಿದ್ದಾರೆ. ಈ ರ‍್ಯಾಲಿಯಲ್ಲಿ 11 ಲಕ್ಷ ಸಾಧುಗಳು ಪಾಲ್ಗೊಳ್ಳಲಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.