ಬೆಂಗಳೂರು: ಭಾರತ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಮೊದಲ ಪಂದ್ಯದಲ್ಲಿ ಸೋತಿರುವ ಭಾರತ ತಂಡ ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

ಮಲ್ಲನ್ಪುರ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮಹಿಳಾ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಭಾರತದ ಪರ ಅಬ್ಬರದ ಬ್ಯಾಟಿಂಗ್ ನಡೆಸಿದ ಸ್ಮೃತಿ ಮಂದಾನ ಕೇವಲ 77 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಈ ಶತಕದ ಮೂಲಕ ಅವರು ಭಾರತದ ಪರ 2ನೇ ವೇಗದ ಶತಕ ಸಿಡಿಸಿದ ಸಾಧನೆ ಮಾಡಿದರು.

ಕೌರ್ ದಾಖಲೆ ಸರಿಗಟ್ಟಿದ ಮಂದಾನ

ಇದಕ್ಕೂ ಮೊದಲು ಇಂಗ್ಲೆಂಡ್ ವಿರುದ್ಧ ಹರ್ಮನ್ಪ್ರಿತ್ ಕೌರ್ 82 ಎಸೆತಗಳಲ್ಲಿ ಶತಕ ಸಿಡಿಸಿದ್ದು 2ನೇ ವೇಗದ ಶತಕವಾಗಿತ್ತು. ಮಂದಾನ ಇಂದಿನ ಶತಕದ ಮೂಲಕ ಕೌರ್ ಅವರ ದಾಖಲೆ ಮುರಿದಿದ್ದಾರೆ. ಭಾರತ ಮಹಿಳಾ ತಂಡದ ಪರ ಅತೀ ವೇಗದ ಶತಕ ಸಿಡಿಸಿದ ದಾಖಲೆ ಕೂಡ ಸ್ಮೃತಿ ಮಂದಾನ ಹೆಸರಿನಲ್ಲಿದೆ. ಅವರು, ಐರ್ಲೆಂಡ್ ಮಹಿಳಾ ತಂಡದ ವಿರುದ್ಧ ಕೇವಲ 70 ಎಸೆತಗಳಲ್ಲಿ ಶತಕ ಸಿಡಿಸಿರುವುದು ಭಾರತದ ಪರ ದಾಖಲಾಗಿರುವ ಅತೀ ವೇಗದ ಶತಕವಾಗಿದೆ.

ಅಂತಿಮವಾಗಿ ಸ್ಮೃತಿ ಮಂದಾನ ಅವರು ಕೇವಲ 91 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 14 ಬೌಂಡರಿ ನೆರವಿನಿಂದ 117 ರನ್ ಗಳಿಸಿ ತಾಲಿಯಾ ಮೆಕ್ಗ್ರಾತ್ ಅವರಿಗೆ ವಿಕೆಟ್ ಒಪ್ಪಿಸಿ ಹೊರನಡೆದರು.
.ICC ಟಿ–20 ರ್ಯಾಂಕಿಂಗ್: ಮೊದಲ ಬಾರಿಗೆ ನಂ.1 ಸ್ಥಾನಕ್ಕೇರಿದ ಕನ್ನಡಿಗ ವರುಣ್.Smriti Mandhana | ಮೂರೂ ಮಾದರಿಯಲ್ಲಿ ಶತಕ; ದಾಖಲೆ ಬರೆದ ಸ್ಮೃತಿ ಮಂದಾನ.
ಸ್ಮೃತಿ ಮಂದಾನ ನಂ.1

ನಿನ್ನೆ (ಮಂಗಳವಾರ) ಬಿಡುಗಡೆಯಾದ ನೂತನ ಐಸಿಸಿ ಮಹಿಳಾ ಏಕದಿನ ರ್ಯಾಂಕಿಂಗ್ನಲ್ಲಿ ಭಾರತದ ಸ್ಮೃತಿ ಮಂದಾನ ಮತ್ತೊಮ್ಮೆ ವಿಶ್ವದ ನಂಬರ್.1 ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದಲ್ಲಿ, ಮಂದಾನ 735 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ. ಇಂಗ್ಲೆಂಡ್ನ ನ್ಯಾಟ್ ಸಿವರ್-ಬ್ರಂಟ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.