ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕ್ವಾಷ್‌: ಕ್ವಾರ್ಟರ್‌ಗೆ ಸೌರಭ್‌

Last Updated 27 ಫೆಬ್ರುವರಿ 2019, 15:36 IST
ಅಕ್ಷರ ಗಾತ್ರ

ಚಿಕಾಗೊ: ಗೆಲುವಿನ ಓಟ ಮುಂದುವರಿಸಿರುವ ಭಾರತದ ಸೌರವ್‌ ಘೋಷಾಲ್‌, ಪಿಎಸ್‌ಎ ವಿಶ್ವ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಬುಧವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಪ್ರೀ ಕ್ವಾರ್ಟರ್‌ ಫೈನಲ್‌ನಲ್ಲಿ ಸೌರವ್‌ 11–13, 11–7, 11–7, 13–11ರಲ್ಲಿ ವೇಲ್ಸ್‌ನ ಜೊಯೆಲ್‌ ಮಕಿನ್‌ ಅವರನ್ನು ಪರಾಭವಗೊಳಿಸಿದರು.

ಚಾಂಪಿಯನ್‌ಷಿಪ್‌ನಲ್ಲಿ 11ನೇ ಶ್ರೇಯಾಂಕ ಹೊಂದಿರುವ ಸೌರವ್‌ ಮೊದಲ ಗೇಮ್‌ನಲ್ಲಿ ನಿರಾಸೆ ಕಂಡರು. ಇದರಿಂದ ಎದೆಗುಂದದ ಭಾರತದ 32 ವರ್ಷ ವಯಸ್ಸಿನ ಆಟಗಾರ ನಂತರ ಮೋಡಿ ಮಾಡಿದರು.

ಎರಡು ಮತ್ತು ಮೂರನೇ ಗೇಮ್‌ಗಳಲ್ಲಿ ನಿರಾಯಾಸವಾಗಿ ಗೆದ್ದ ಸೌರವ್‌, 2–1 ಮುನ್ನಡೆ ಗಳಿಸಿದರು. ನಾಲ್ಕನೇ ಗೇಮ್‌ನ ಶುರುವಿನಲ್ಲಿ ಭಾರತದ ಆಟಗಾರ 5–8ರಿಂದ ಹಿಂದಿದ್ದರು. ಹೀಗಿದ್ದರೂ ವಿಶ್ವಾಸ ಕಳೆದುಕೊಳ್ಳದ ಅವರು ಕೆಚ್ಚೆದೆಯಿಂದ ಹೋರಾಡಿ ಗೆಲುವಿನ ತೋರಣ ಕಟ್ಟಿದರು.

ಸೌರವ್‌ ಅವರು ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಎರಡನೇ ಸಲ ಎಂಟರ ಘಟ್ಟ ಪ್ರವೇಶಿಸಿದ ಸಾಧನೆ ಮಾಡಿದ್ದಾರೆ. 2013ರಲ್ಲಿ ಮೊದಲ ಬಾರಿಗೆ ಕ್ವಾರ್ಟರ್‌ ಫೈನಲ್ ಪ್ರವೇಶಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT