ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ. 28, 29ಕ್ಕೆ ರಾಜ್ಯಮಟ್ಟದ ಹ್ಯಾಂಡ್‌ಬಾಲ್

ಹ್ಯಾಂಡ್‌ಬಾಲ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಕೆ.ಎಚ್. ಶಿವರಾಂ
Last Updated 26 ಡಿಸೆಂಬರ್ 2019, 16:07 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಇಲ್ಲಿನ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ರಾಜ್ಯಮಟ್ಟದ ಪುರುಷ ಹಾಗೂ ಮಹಿಳೆಯರ ಹೊನಲು ಬೆಳಕಿನ ಹ್ಯಾಂಡ್‌ಬಾಲ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ’ ಎಂದು ಹ್ಯಾಂಡ್‌ಬಾಲ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಕೆ.ಎಚ್. ಶಿವರಾಂ ತಿಳಿಸಿದರು.

‘ಜಿಲ್ಲಾ ಹ್ಯಾಂಡ್‌ಬಾಲ್ ಸಂಸ್ಥೆ, ಕದಂಬ ಹ್ಯಾಂಡ್‌ಬಾಲ್ ಯೂತ್ ಅಸೋಸಿಯೇಷನ್‌ನಿಂದ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್ ಕ್ರೀಡಾಪಟು ದಿ. ಎಸ್.ಎನ್. ಸ್ವಾಮಿ ಅವರ ಸ್ಮರಣಾರ್ಥ ಕ್ರೀಡಾಕೂಟ ಆಯೋಜಿಸಲಾಗಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘28ರಂದು ಸಂಜೆ 5ಕ್ಕೆ ಆರಂಭವಾಗುವ ಪಂದ್ಯಾವಳಿಯ ನೇತೃತ್ವವನ್ನು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಹಿಸುವರು. ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಧ್ವಜಾರೋಹಣ ನೆರವೇರಿಸಲಿದ್ದಾರೆ’ ಎಂದರು.

‘ರಾಜ್ಯದ 22 ಪುರುಷ, 12 ಮಹಿಳಾ ಸೇರಿ ಒಟ್ಟು 36 ತಂಡಗಳಿಂದ 600ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಪಂದ್ಯಾವಳಿಗಾಗಿ ಈಗಾಗಲೇ ಮೂರು ಅಂಕಣ ಸಿದ್ಧಪಡಿಸಲಾಗಿದೆ. ಪ್ರವೇಶ ಸಂಪೂರ್ಣ ಉಚಿತವಾಗಿದೆ. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಪುರುಷ ಹಾಗೂ ಮಹಿಳಾ ತಂಡಗಳಿಗೆ ಕ್ರಮವಾಗಿ ₹ 15ಸಾವಿರ, ₹ 10ಸಾವಿರ, ₹ 5ಸಾವಿರ ನಗದು ಬಹುಮಾನ, ಆಕರ್ಷಕ ಟ್ರೋಫಿ, ವೈಯಕ್ತಿಕ ಬಹುಮಾನ ನೀಡಲಾಗುವುದು’ ಎಂದು ತಿಳಿಸಿದರು.

‘27ರ ರಾತ್ರಿಯಿಂದ 29ರ ರಾತ್ರಿವರೆಗೂ ಕ್ರೀಡಾಪಟುಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಇರಲಿದೆ. ಸಂತ ಜೋಸೆಫರ ಕಾನ್ವೆಂಟ್ ಶಾಲೆ ಮತ್ತು ಪಾರ್ಶ್ವನಾಥ ಶಾಲೆಯಲ್ಲಿ ಮಹಿಳೆಯರಿಗೆ, ಮುರುಘಾಮಠ, ಡಾನ್‌ಬಾಸ್ಕೊ, ಸಂಪಿಗೆ ಸಿದ್ದೇಶ್ವರ, ವಾಸವಿ ವಿದ್ಯಾಸಂಸ್ಥೆ, ರೋಟರಿ ಶಾಲೆಗಳಲ್ಲಿ ಪುರುಷರಿಗೆ ವಸತಿ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ಕಲ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಸಂಸ್ಥೆ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ವಿಶ್ವ, ರಾಜಣ್ಣ, ಮೋಹನ್, ಪ್ರಸನ್ನ, ಪ್ರದೀಪ್, ಅನು ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT