ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹ್ಯಾಂಡ್‌ಬಾಲ್‌: ಮಂಡ್ಯ, ದಾವಣಗೆರೆ ತಂಡಕ್ಕೆ ಜಯ

Published 9 ನವೆಂಬರ್ 2023, 23:30 IST
Last Updated 9 ನವೆಂಬರ್ 2023, 23:30 IST
ಅಕ್ಷರ ಗಾತ್ರ

ಕಲಬುರಗಿ: ನಗರದಲ್ಲಿ ಗುರುವಾರ ಮುಕ್ತಾಯಗೊಂಡ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಟೂರ್ನಿಯ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಕ್ರಮವಾಗಿ ಮಂಡ್ಯ ಹಾಗೂ ದಾವಣಗೆರೆ  ಜಿಲ್ಲಾ ತಂಡಗಳು ಪ್ರಶಸ್ತಿ ಗೆದ್ದುಕೊಂಡವು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಬಾಲಕರ ವಿಭಾಗದ ಫೈನಲ್‌ ಪಂದ್ಯದಲ್ಲಿ ಮಂಡ್ಯ ಬಾಲಕರ ತಂಡವು ಆತಿಥೇಯ ಕಲಬುರಗಿ ಜಿಲ್ಲಾ ತಂಡವನ್ನು 17–10ರಲ್ಲಿ ಮಣಿಸುವ ಮೂಲಕ ಗೆಲುವಿನ ನಗೆ ಬೀರಿತು.

ಬಾಲಕಿಯರ ವಿಭಾಗದ ಫೈನಲ್‌ ಪಂದ್ಯದಲ್ಲಿ ದಾವಣಗೆರೆ ಜಿಲ್ಲಾ ತಂಡವು 14–04ರಲ್ಲಿ ಮಂಗಳೂರು ಜಿಲ್ಲಾ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಬಾಲಕ, ಬಾಲಕಿಯರ ವಿಭಾಗದಲ್ಲಿ ಮೊದಲ ಹಾಗೂ ಎರಡನೇ ಸ್ಥಾನ ಪಡೆದ ಮತ್ತು ಉಳಿದ ತಂಡಗಳ ಉತ್ತಮ ಆಟಗಾರರನ್ನು 50:25:25ರ ಅನುಪಾತದಲ್ಲಿ ರಾಜ್ಯ ತಂಡಕ್ಕೆ ಆಯ್ಕೆ ಮಾಡಿ ರಾಷ್ಟ್ರಮಟ್ಟದ ಟೂರ್ನಿಗೆ ಕಳುಹಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT