ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡುಬಿದಿರೆಯಲ್ಲಿ ರಾಜ್ಯ ‘ವುಶು’ ಸ್ಪರ್ಧೆ ನಾಳೆಯಿಂದ

Last Updated 29 ಸೆಪ್ಟೆಂಬರ್ 2021, 17:34 IST
ಅಕ್ಷರ ಗಾತ್ರ

ಮೂಡುಬಿದಿರೆ: ರಾಜ್ಯ ‘ವುಶು’ ಸ್ಪರ್ಧೆ ಅಕ್ಟೋಬರ್ 1ರಿಂದ 4ರವರೆಗೆ ಇಲ್ಲಿನ ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ನಡೆಯಲಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದಕ್ಷಿಣ ಕನ್ನಡ ವುಶು ಸಂಸ್ಥೆ ಗೌರವ ಅಧ್ಯಕ್ಷ ಎಂ.ಮೋಹನ ಆಳ್ವ ‘ವಿವಿಧ ಜಿಲ್ಲೆಗಳಿಂದ 600 ಕ್ರೀಡಾಪಟುಗಳು 69 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಎರಡು ಬಾರಿ ‌ವುಶು ಕೂಟ ನಡೆದಿದೆ. ಕಳೆದ ಬಾರಿ ಕೋವಿಡ್‌ ಪರಿಸ್ಥಿತಿಯಲ್ಲೂ ಜಿಲ್ಲಾ ತಂಡ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಮಗ್ರ ತಂಡ ಪ್ರಶಸ್ತಿ ಗೆದ್ದುಕೊಂಡಿದೆ’ ಎಂದು ತಿಳಿಸಿದರು.

ಶಾಸಕ ಉಮಾನಾಥ ಕೋಟ್ಯಾನ್ ಕ್ರೀಡಾಕೂಟ ಉದ್ಘಾಟಿಸುವರು. ರಾಜ್ಯ ವುಶು ಸಂಸ್ಥೆ ಅಧ್ಯಕ್ಷ ವಿ.ಸಿ.ಚರಂತಿಮಠ ಮತ್ತು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು ಎಂದುಮೋಹನ ಆಳ್ವ ಅವರು ವಿವರಿಸಿದರು.

‌ಜಿಲ್ಲಾ ಘಟಕದ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಉಪಾಧ್ಯಕ್ಷ ಗುರುಚಂದ್ರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ನಿತಿನ್ ಎನ್. ಸುವರ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT